More

    ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂನಲ್ಲೂ ಇನ್ನು ಬ್ಲೂ ಟಿಕ್​ ಖರೀದಿಸಬಹುದು!

    ಬೆಂಗಳೂರು: ಟ್ವಿಟರ್​ಅನ್ನೇ ಅನುಸರಿಸಿರುವ ಮೆಟಾ ಈಗ ಹಣ ಪಾವತಿ ಮಾಡಿದರೆ ಬ್ಲೂ ಟಿಕ್​ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಬಗ್ಗೆ ಫೇಸ್​ಬುಕ್​ ಸಂಸ್ಥಾಪಕ ಮಾರ್ಕ್​ ಜುಕರ್​ಬರ್ಗ್​ ತಮಮ್ಮ ಫೇಸ್​ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಫೇಸ್‌ಬುಕ್​ನ ಮಾತೃ ಸಂಸ್ಥೆ ಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಭಾನುವಾರದಂದು ಮೆಟಾ ವೆರಿಫೈಡ್ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದರು, ಇದು ಒಬ್ಬರ ಖಾತೆಯನ್ನು ದೃಢೀಕರಿಸಲು ತಿಂಗಳಿಗೆ $11.99 ರಿಂದ ಪ್ರಾರಂಭವಾಗುವ ಸೇವೆಯಾಗಿದೆ. ಅಂದರೆ ಸುಮಾರು 900 ರೂ. ಇದು ಟ್ವಿಟ್ಟರ್‌ನಲ್ಲಿ ಎಲೋನ್ ಮಸ್ಕ್ ಅವರ ಇದೇ ನಡೆಯನ್ನು ಕಾಪಿ ಮಾಡಿದಂತಿದೆ.

    “ಈ ಹೊಸ ಫೀಚರ್​ನಿಂದ ನಮ್ಮ ಸೇವೆಗಳಾದ್ಯಂತ ದೃಢೀಕರಣ ಮತ್ತು ಸುರಕ್ಷತೆಯನ್ನು ಹೆಚ್ಚಿಸುವುದು” ಎಂದು ಜುಕರ್‌ಬರ್ಗ್ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗೆ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ಬರೆದಿದ್ದಾರೆ.

    ಈ ಹೊಸ ಫೀಚರ್​ ಅಮೆರಿಕ ಮತ್ತು ಇತರ ದೇಶಗಳಲ್ಲಿ ಮಾರುಕಟ್ಟೆಗೆ ಬರುವ ಮೊದಲು ಮೆಟಾ ವೆರಿಫೈಡ್ ಅನ್ನು ಈ ವಾರ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಹೊರತರಲಾಗುವುದು ಎಂದು ಹೇಳಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts