More

    ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ ನಮ್ಮ ಮೆಟ್ರೋ; ಏನದು?

    ಬೆಂಗಳೂರು: ನೇರಳೆ ಬಣ್ಣದ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಶುಭ ಸುದ್ದಿ ಒಂದನ್ನು ನೀಡಿದೆ. ಬೆಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ಮುಂದಾಗಿರುವುದಾಗಿ ಬಿಎಂಆರ್​ಸಿಎಲ್​ ತಿಳಿಸಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್​, ಪೀಕ್ ಆವರ್​ಗಳಲ್ಲಿ ಪ್ರತಿ‌ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದೆ.

    ಬಿಎಂಆರ್‌ಸಿಎಲ್, ದಿನಾಂಕ 26.02.2024 ಸೋಮವಾರದಿಂದ ಬೆಳಗಿನ ದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ -ಮೆಜೆಸ್ಟಿಕ್ ಮತ್ತು ಗರುಡಾಚಾರ್ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ರೈಲು ಸೇವೆಗಳನ್ನು ಒದಗಿಸಲಾಗುತ್ತದೆ. ಇದು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆ.ಆರ್. ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪ್ರಯಾಣಿಕರ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಲಿದೆ.

    ಇದನ್ನೂ ಓದಿ: ಭಾರತದ ಪರ ಮತ್ತೊಂದು ಇತಿಹಾಸ ರಚಿಸಿದ ಆರ್​. ಅಶ್ವಿನ್

    ಈ ಮಾರ್ಗದಲ್ಲಿ ಬೆಳಿಗ್ಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲಾ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ. ಇದಲ್ಲದೆ, ಬೇರೆಡೆಯಿಂದ ಬೆಂಗಳೂರು ನಗರಕ್ಕೆ ಮುಂಜಾನೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ, ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ-ಮೆಜೆಸ್ಟಿಕ್​ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 5.00 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಜತೆಗೆ ರೈಲು, ಇಂಟರ್‌ಸಿಟಿ ಬಸ್‌ಗಳ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ರೈಲು ಸೇವೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲಿನ‌ ಸೇವೆ 5 ಗಂಟೆಗೆ ಆರಂಭವಾಗಲಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ, 5.00 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts