More

    ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಫೆ. 11ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

    ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಫೆಬ್ರವರಿ 11ರಂದು ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ BMRCL ಫೆಬ್ರವರಿ 11 (ಭಾನುವಾರ) ನಗರದ ಎಂ.ಜಿ ರಸ್ತೆಯಿಂದ ಟ್ರಿನಿಟಿ ಸರ್ಕಲ್​ವರೆಗೆ (ನೇರಳೆ ಮಾರ್ಗ) ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಲಿದೆ ಎಂದು ತಿಳಿಸಿದೆ.

    ಇದನ್ನೂ ಓದಿ: MI ನಾಯಕತ್ವ ಬಿಕ್ಕಟ್ಟು; ಮತ್ತೊಂದು ಹಂತ ತಲುಪಿದ ರೋಹಿತ್​-ಹಾರ್ದಿಕ್​ ನಡುವಿನ ಕಿತ್ತಾಟ

    ಪ್ರಕಟಣೆಯಲ್ಲಿ ಏನಿದೆ?

    ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳನಡುವೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್‌ ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಿಗ್ಗೆ 07.00 ಗಂಟೆಯಿಂದ ಚಲಿಸುತ್ತವೆ.

    ಬೆಳಿಗ್ಗೆ 9.00 ಗಂಟೆಯ ನಂತರ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ. ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7.00 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲಿನ ಬದಲಾವಣೆಯನ್ನು ಗಮನಿಸ ಬೇಕೆಂದು ಕೋರಿದೆ. ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ತನ್ನ ಪ್ರಕಟಣೆಯಲ್ಲಿ ವಿಷಾದಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts