More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ

    ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(ಬಿಎಂಟಿಸಿ) ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಶಾಲಾ/ ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

    ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾ.31 ರಿಂದ ಏ.15 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

    ಇದನ್ನೂ ಓದಿ: ತಾಯಿಯ ಪಕ್ಕ ಮಲಗಿದ್ದ 42 ದಿನಗಳ ನವಜಾತ ಶಿಶು ಅಪಹರಣ; ಮನೆಗೇ ನುಗ್ಗಿ ಕದ್ದೊಯ್ದಿದ್ದ ಮಹಿಳೆ

    ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ಗೊಳಿಸಲಾಗುವುದು. ಹೆಚ್ಚುವರಿ ಬಸ್‌ಗಳ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

    ಹಾಸನ ಟಿಕೆಟ್​ ದಂಗಲ್​​; ಮತ್ತೊಬ್ಬ ಆಕಾಂಕ್ಷಿ ಮುನ್ನೆಲೆಗೆ

    ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ!

    ವಿಜಯಾನ೦ದಗೆ ಐದು ಪ್ರಶಸ್ತಿಗಳು: ಇಂದು ಚೌಡಯ್ಯ ಸ್ಮಾರಕ ಭವನದಲ್ಲಿ ಚಿತ್ರಸಂತೆ ವಾರ್ಷಿಕ ಪ್ರಶಸ್ತಿ ಪ್ರದಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts