ಮೈಸೂರು ಹೆದ್ದಾರಿಯ ಟೋಲ್ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ BMW ಕಾರು

bmwcarfire
Published on

ಮೈಸೂರು: ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.

ಮೈಸೂರು ದಕ್ಷಿಣ ಠಾಣೆ ಪೊಲೀಸರು ಹೇಳುವ ಪ್ರಕಾರ, ಬಿಎಂಡಬ್ಲ್ಯು ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು  ತಿಳಿಸಿದ್ದಾರೆ.

ಮೈಸೂರಿನ ಕುಟುಂಬವೊಂದು ನಂಜನಗೂಡಿನಿಂದ ವಾಪಸ್ಸಾಗುತ್ತಿದ್ದ ವೇಳೆ ಭಾನುವಾರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಇದು ಆಕಸ್ಮಿಕ ಬೆಂಕಿ. ಘಟನೆಯಲ್ಲಿ ವಾಹನ ಜಖಂಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿಗೆ ಬೆಂಕಿ ಹೇಗೆ ತಗುಲಿತು? ಎನ್ನುವ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net