ಬೆಳಗಾವಿ: ಅಂತಾರಾಜ್ಯ ಗಡಿ ವಿವಾದ ಹಾಗೂ ಮಹದಾಯಿ ಬಗ್ಗೆ ಹಿರಿಯ ಅಧಿಕಾರಿಗಳ ಜತೆಗೆ ರ್ಚಚಿಸಿ ಸಮಸ್ಯೆ ನಿವಾರಿಸುತ್ತೇವೆ. ಮಹಾರಾಷ್ಟ್ರದ ಜತೆಗೆ ನೀರು ಹಂಚಿಕೆ ಕುರಿತು ದೆಹಲಿಯಲ್ಲಿ ರ್ಚಚಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
865 ಕೋಟಿ ರೂ. ಬಿಡುಗಡೆ: ಬೆಳಗಾವಿಯ ಸುವರ್ಣಸೌಧದಲ್ಲಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಸಂಪುಟ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಿಂದ ಉಂಟಾಗಿರುವ ಹಾನಿ ಸರಿಪಡಿಸಲು ಮೂಲಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 865 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದಕ್ಕೂ ಮೊದಲು ವಿಶ್ವೇಶ್ವರಯ್ಯನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ 76.80 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಿದ ರಾಜ್ಯದ ಮೊದಲ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ (ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ್, ದುರ್ಯೋಧನ ಐಹೊಳೆ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಇತರರಿದ್ದರು.
ಜನಪರ ಬಜೆಟ್ ಭರವಸೆ
ಬೈಲಹೊಂಗಲ(ಬೆಳಗಾವಿ): ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪ ತೊಟ್ಟಿದ್ದು, ಬಜೆಟ್ನಲ್ಲಿ ಎಲ್ಲ ವರ್ಗಗಳ ಜನರ ಹಿತ ಕಾಯಲು ಜನಪರ ಯೋಜನೆ ಘೊಷಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸವದತ್ತಿ ತಾಲೂಕಿನ ಸುಕ್ಷೇತ್ರ ಇಂಚಲದ ಶ್ರೀಶಿವಯೋಗೀಶ್ವರ ಸಾಧು ಸಂಸ್ಥಾನ ಮಠದಲ್ಲಿ ಡಾ.ಶಿವಾನಂದ ಭಾರತೀ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವ ನಿಮಿತ್ತ ಶ್ರೀಶಿವಯೋಗೀಶ್ವರ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ, ರೈತರ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ. ದಾವೋಸ್ ಸಮ್ಮೇಳನದಲ್ಲಿ ಪಾಲ್ಗೊಂಡು 40ಕ್ಕಿಂತ ಅಧಿಕ ಉದ್ಯಮಿಗಳಿಗೆ ರಾಜ್ಯಕ್ಕೆ ಬರುವಂತೆ ಆಹ್ವಾನಿಸಿದ್ದು, ಹೆಚ್ಚಿನ ಕೈಗಾರಿಕೆಗಳ ಸ್ಥಾಪನೆಗೆ ಶ್ರಮಿಸುತ್ತಿದ್ದೇನೆ ಎಂದರು. ಕಾರ್ಯಕ್ರಮದಲ್ಲಿ ಡಾ.ಶಿವಾನಂದ ಭಾರತೀ ಶ್ರೀಗಳ ಭಾವಚಿತ್ರ ಇರುವ ಅಂಚೆ ಲಕೋಟೆಯನ್ನು ಸಿಎಂ ಲೋಕಾರ್ಪಣೆಗೊಳಿಸಿದರು.