16 C
Bangalore
Thursday, December 12, 2019

ಫಿಟ್​ ಆಗಿದ್ದರೂ, ವಿಶ್ವಕಪ್​ನಿಂದ ಹೊರಹಾಕಿದ ಎಸಿಬಿ: ಅಫ್ಘಾನಿಸ್ತಾನ ಕ್ರಿಕೆಟ್​ ಮಂಡಳಿ ವಿರುದ್ಧ ಶಹಜಾದ್​ ಆಕ್ರೋಶ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ನವದೆಹಲಿ: ಕ್ರಿಕೆಟ್​ ವಿಶ್ವಕಪ್​ನಲ್ಲಿ ಆಡಲು ಫಿಟ್​ ಆಗಿದ್ದರೂ, ಮೊಣಕಾಲಿನ ಗಾಯದ ಸಮಸ್ಯೆ ಎಂಬ ಕುಂಟು ನೆಪ ಒಡ್ಡಿ ತಮ್ಮನ್ನು ಟೂರ್ನಿಯಿಂದ ತವರಿಗೆ ವಾಪಸು ಕಳುಹಿಸಲಾಗಿದೆ. ಇದರ ಹಿಂದೆ ಅಫ್ಘಾನಿಸ್ತಾನ ಕ್ರಿಕೆಟ್​ ಮಂಡಳಿಯ (ಎಸಿಬಿ) ಪಿತೂರಿ ಇದೆ ಎಂದು ಅಫ್ಘಾನಿಸ್ತಾನದ ವಿಕೆಟ್​ಕೀಪರ್​ ಬ್ಯಾಟ್ಸ್​ಮನ್​ ಮೊಹಮ್ಮದ್​ ಶಹಜಾದ್​ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯೂಜಿಲೆಂಡ್​ ವಿರುದ್ಧದ ಪಂದ್ಯಕ್ಕಾಗಿ ಅಭ್ಯಾಸ ನಡೆಸಿ ಹೋಟೆಲ್​ಗೆ ಮರಳುವಾಗ ನನ್ನ ಮೊಬೈಲ್​ ಫೋನ್​ ಅನ್ನು ನೋಡಿದೆ. ಅದರಲ್ಲಿ ನನ್ನನ್ನು ವಾಪಸು ಕರೆಯಿಸಿಕೊಳ್ಳುತ್ತಿರುವುದಾಗಿ ಎಸಿಬಿಯಿಂದ ಬಂದಿದ್ದ ಸಂದೇಶ ಕಾಣಿಸಿತು. ನಾನು ಸೇರಿ ತಂಡದ ಬೇರಾವುದೇ ಆಟಗಾರರಿಗೂ ಈ ವಿಷಯ ತಿಳಿದಿರಲಿಲ್ಲ. ವಿಷಯ ಗೊತ್ತಾದ ಬಳಿಕ ನನ್ನಂತೆ ಅವರು ಕೂಡ ಅಚ್ಚರಿಗೊಂಡರು ಎಂದು ಹೇಳಿದರು.

ನಾನು ಆಡಲು ಫಿಟ್​ ಆಗಿದ್ದೆ. ಆದರೂ ನಾನು ಆಡಲು ಸಂಪೂರ್ಣ ಸಮರ್ಥನಾಗಿಲ್ಲ ಎಂದು ಹೇಗೆ ನಿರ್ಧರಿಸಲಾಯಿತೋ ಎಂಬುದು ಗೊತ್ತಾಗುತ್ತಿಲ್ಲ. ಎಸಿಬಿಯಲ್ಲಿನ ಕೆಲವು ಜನರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ನನ್ನನ್ನು ವಾಪಸು ಕರೆಯಿಸಿಕೊಳ್ಳಲಾಗುತ್ತದೆ ಎಂಬ ಸಂಗತಿ ತಂಡದ ಮ್ಯಾನೇಜರ್​, ವೈದ್ಯರು ಮತ್ತು ನಾಯಕನಿಗೆ ಮಾತ್ರ ಗೊತ್ತಿತ್ತು. ತಂಡದ ಕೋಚ್​ ಫಿಲ್​ ಸಿಮನ್ಸ್​ಗೂ ತುಂಬಾ ತಡವಾಗಿ ಈ ಸಂಗತಿ ತಿಳಿಯಿತು ಎಂದು ಆರೋಪಿಸಿದ್ದಾರೆ.

ಕ್ರಿಕೆಟ್​ ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಫ್ಘಾನಿಸ್ತಾನದ ತಂಡದಲ್ಲಿ ಮಹೊಮ್ಮದ್​ ಶಹಜಾದ್​ ಸ್ಥಾನ ಪಡೆದುಕೊಂಡಿದ್ದರು. ಲಂಡನ್​ಗೆ ಬಂದಿದ್ದ ಅವರು ಪಾಕಿಸ್ತಾನ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡಿದ್ದರು. ಆದರೆ ಅವರ ಎಡ ಮೊಣಕಾಲಿಗೆ ಆಗಿದ್ದ ಗಾಯ ಉಲ್ಬಣಿಸಿತ್ತು. ಆದರೂ ಅವರು ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧದ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಸ್ಥಾನಪಡೆದುಕೊಂಡಿದ್ದರು. ಆದರೆ, ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ತೋರಲು ವಿಫಲರಾಗಿದ್ದರು. (ಏಜೆನ್ಸೀಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...