2 ಬೋಟ್ ಅವಘಡ, 21 ಮಂದಿ ರಕ್ಷಣೆ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಮಂಗಳೂರು/ಪಡುಬಿದ್ರಿ: ಮಂಗಳೂರು ಹಳೇ ಬಂದರಿನಿಂದ ಗುರುವಾರ ಹೊರಟಿದ್ದ ಹಾಗೂ ಉಚ್ಚಿಲದಿಂದ ತೆರಳಿದ್ದ ಬೋಟ್‌ಗಳೆರಡು ಅವಘಡಕ್ಕೀಡಾಗಿದ್ದು, ಒಟ್ಟು 21 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರು ಹಳೇ ಬಂದರಿನ ಮೂಲಕ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್‌ಬೋಟ್ ಕಾಪು ಸಮೀಪ ಮುಳುಗಡೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಟ್‌ನಲ್ಲಿದ್ದ 9 ಮೀನುಗಾರರನ್ನು ಇತರ ಬೋಟ್‌ನವರು ರಕ್ಷಿಸಿದ್ದಾರೆ.

ನಗರದ ಬಶೀರ್ ದಾವೂದ್ ಎಂಬುವರಿಗೆ ಸೇರಿದ ‘ಎಸ್.ಎಂ ಫಿಶರೀಸ್’ ಹೆಸರಿನ ಟ್ರಾಲ್‌ಬೋಟ್ ಸೆ.12ರಂದು ಮಂಗಳೂರಿನ ಹಳೇ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಶುಕ್ರವಾರ ಕಾಪು ದಾಟುತ್ತಿದ್ದಂತೆ ಬೋಟ್ ಒಳಗೆ ನೀರು ನುಗ್ಗಿ ಮುಳುಗಡೆಯಾಗಿದೆ. ಈ ಸಂದರ್ಭ ಬೋಟ್‌ನಲ್ಲಿ 9 ಮಂದಿ ತಮಿಳುನಾಡು ಮೂಲದ ಮೀನುಗಾರರಿದ್ದರು. ಅಲ್ಲೇ ಇದ್ದ ಇತರ ಬೋಟ್‌ನಲ್ಲಿರುವ ಮೀನುಗಾರರು ಅವರನ್ನು ರಕ್ಷಣೆ ಮಾಡಿದ್ದಾರೆ. ಬೋಟ್ ಸಂಪೂರ್ಣ ಮುಳುಗಿದ್ದು ಸುಮಾರು 30 ಲಕ್ಷ ರೂ. ನಷ್ಟ ಸಂಭವಿಸಿದೆ. ಈ ಕುರಿತು ಕರಾವಳಿ ಕಾವಲು ಪಡೆ, ಮೀನುಗಾರಿಕಾ ನಿರ್ದೇಶಕರು, ಟ್ರಾಲ್‌ಬೋಟ್ ಮೀನುಗಾರರ ಸಂಘಕ್ಕೆ ಮಾಹಿತಿ ನೀಡಲಾಗಿದೆ.

ಉಚ್ಚಿಲ ಬಳಿ 12 ಮಂದಿಯ ರಕ್ಷಣೆ
ಉಚ್ಚಿಲ ಸಮೀಪದ ಸಮುದ್ರದಲ್ಲಿ ಮೀನುಗಾರಿಕಾ ಬೋಟು ಅಪಘಾತಕ್ಕೀಡಾಗಿದ್ದು, ಬೋಟ್‌ನಲ್ಲಿದ್ದ 12 ಮಂದಿ ಮೀನುಗಾರರನ್ನು ಶುಕ್ರವಾರ ರಕ್ಷಿಸಲಾಗಿದೆ.
ಉಚ್ಚಿಲ ನಿವಾಸಿ ಅಶೋಕ್ ಪುತ್ರನ್ ಎಂಬುವರಿಗೆ ಸೇರಿದ ‘ಕರಿಯ ಜೋಡಿ’ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಈ ವೇಳೆ ಬೋಟ್ ಸಮುದ್ರದ ಅಲೆಗೆ ಸಿಲುಕಿತು. ಕೂಡಲೇ ಮೀನುಗಾರಿಕೆ ನಡೆಸುತ್ತಿದ್ದ ‘ಶಿವಪ್ರಸಾದ್’ ಬೋಟ್‌ನವರು 12 ಮೀನುಗಾರರನ್ನು ರಕ್ಷಿಸಿದರು. ಅಪಘಾತಕ್ಕೀಡಾದ ಬೋಟ್‌ನ್ನು ಮಲ್ಪೆ ಬಂದರಿಗೆ ತಂದಿರುವುದಾಗಿ ತಿಳಿದುಬಂದಿದೆ.

ದೋಣಿ ಮಗುಚಿ ಮೀನುಗಾರ ಮೃತ್ಯು
ಕಾಸರಗೋಡು: ಬೇಕಲದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಬಿದ್ದು ಕೀಯೂರು ಕಡಪ್ಪುರ ನಿವಾಸಿ ದಾಸನ್(57) ಎಂಬುವರು ಮೃತಪಟ್ಟಿದ್ದಾರೆ. ಅವರ ಮೃತದೇಹ ಪಳ್ಳಿಕೆರೆ ಸಮುದ್ರದಲ್ಲಿ ಶುಕ್ರವಾರ ಪತ್ತೆಯಾಗಿದೆ.
ಸತೀಶನ್ ಎಂಬುವರ ಮಾಲೀಕತ್ವದ ದೋಣಿಯಲ್ಲಿ ದಾಸನ್ ಸಹಿತ ಐವರು ಮೀನು ಹಿಡಿಯಲು ತೆರಳಿದ್ದು, ವಾಪಸಾಗುವ ಸಂದರ್ಭ ಬೃಹತ್ ಅಲೆಗೆ ಸಿಲುಕಿ ದೋಣಿ ಮಗುಚಿತ್ತು. ಈ ಸಂದರ್ಭ ದಾಸನ್ ನಾಪತ್ತೆಯಾಗಿದ್ದು, ದೋಣಿಯಲ್ಲಿದ್ದ ಶರತ್ ತಿಲಕನ್, ಮಜೇಶ್ ಕೃಷ್ಣನ್, ಅರುಣ್ ಕುಮಾರ್ ಹಾಗೂ ರಮೇಶ್ ರಾಮ್ ಅವರನ್ನು ಇತರ ಮೀನುಗಾರರು ರಕ್ಷಿಸಿ ದಡ ಸೇರಿಸಿದ್ದರು. ಅಲೆಗೆ ಸಿಲುಕಿದ ದೋಣಿ ಹಾನಿಗೀಡಾಗಿದ್ದು, ಮೀನಿನ ಬಲೆ ನಾಶವಾಗಿದೆ. ಬೇಕಲ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...