More

    ಅಯ್ಯನಕೆರೆಯಲ್ಲಿ ಬೋಟಿಂಗ್ ಸೌಲಭ್ಯ

    ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಅಯ್ಯನಕೆರೆಯಲ್ಲಿ ಜಿಲ್ಲಾಡಳಿತದಿಂದ ಸೋಮವಾರದಿಂದ ಐದು ದಿನಗಳ ಕಾಲ ಜಲವಿಹಾರ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.

    ಸಖರಾಯಪಟ್ಟಣದ ರಂಗನಾಥಸ್ವಾಮಿ ರಥೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ಅಯ್ಯನಕೆರೆಯಲ್ಲಿ ಆರಂಭಿಸಿರುವ ಬೋಟಿಂಗ್‌ಗೆ ಚಾಲನೆ ನೀಡಿ ಮಾತನಾಡಿದರು.
    ಬೋಟಿಂಗ್‌ನಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕೆರೆ ನೀರನ್ನು ಕುಡಿಯಲು ಬಳಸುವುದರಿಂದ ಕಲುಷಿತ ಮಾಡಬಾರದು. ಅಗತ್ಯವಿದ್ದರೆ ಮಾತ್ರ ವಿದ್ಯುತ್ ಚಾಲಿತ ಬೋಟ್‌ಗಳನ್ನು ಬಳಸಬೇಕು ಎಂದು ಹೇಳಿದರು.
    ಕ್ಷೇತ್ರ ವ್ಯಾಪ್ತಿಯ ಸಖರಾಯಪಟ್ಟಣದಲ್ಲಿ ಜ.29ರಂದು ಹೋಬಳಿ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಈ ಭಾಗದ ನಾಗರಿಕರು ಸಭೆಯ ಸದ್ಬಳಕೆ ಮಾಡಿಕೊಳ್ಳಬೇಕು. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಿಸುತ್ತಿರುವ ಸಂಕ್ರಾಂತಿ ಸಂದರ್ಭದಲ್ಲಿ ಜನತೆಯ ಎಲ್ಲ ಆಶೋತ್ತರಗಳು ಈಡೇರಲಿ ಎಂದು ಆಶಿಸಿದರು.
    ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಅಚ್ಚುಕಟ್ಟುದಾರ ಅಣ್ಣಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಹುಲ್ಲಳ್ಳಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts