ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ!

ಫರಿದಾಬಾದ್‌: ಹರಿಯಾಣಾದ ಫರಿದಾಬಾದ್‌ನಲ್ಲಿ ಒಂದೇ ಕುಟುಂಬದ ಮೂವರು ಸೋದರಿಯರು ಹಾಗೂ ಅವರ ಸೋದರನ ಮೃತದೇಹ ಪತ್ತೆಯಾಗಿದೆ.

ಸೂರಜ್‌ಕುಂದ್‌ ಪ್ರದೇಶದಲ್ಲಿದ್ದ ಮನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಮೃತಪಟ್ಟ ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಡೆತ್​ನೋಟ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಘಟನೆಗೆ ಆರ್ಥಿಕ ಮುಗ್ಗಟ್ಟೇ ಕಾರಣ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. (ಏಜೆನ್ಸೀಸ್)