ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!

ಚಂಡೀಗಢ: ಇತ್ತೀಚೆಗೆ ದೇಶದಲ್ಲಿ ಕುಸಿದು ಬಿದ್ದು, ಹೃದಯಾಘಾತಕ್ಕೆ ಒಳಗಾಗಿ ಹಠಾತ್ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಆ ಪಟ್ಟಿಗೆ ಇನ್ನೊಂದು ಸಾವೂ ಸೇರಿದೆ. ಬಾಡಿಬಿಲ್ಡರ್​ವೊಬ್ಬರು ಜಿಮ್​ನಲ್ಲಿ ಸ್ನೇಹಿತರ ಜತೆ ಮಾತನಾಡುತ್ತಿರುವಾಗಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ. ಚಂಡೀಗಢದಲ್ಲಿ ಈ ಪ್ರಕರಣ ಸಂಭವಿಸಿದ್ದು, ರಾಮ್​ ರಾಣಾ (33) ಸಾವಿಗೀಡಾದ ಬಾಡಿಬಿಲ್ಡರ್​. ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಸ್ನೇಹಿತರ ಜತೆ ಮಾತನಾಡುತ್ತ ಹಿಂದಕ್ಕೆ ಬಾಗಿದ್ದು, ಹಾಗೇ ಕುಸಿದು ಬಿದ್ದಿದ್ದಾರೆ. ಸ್ನೇಹಿತರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರೂ ವೈದ್ಯರು ಆತ ಅದಾಗಲೇ ಮೃತಪಟ್ಟಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಸಾವಿಗೀಡಾದ 33 … Continue reading ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!