ಸೋಮೇಶ್ವರ ಕಡಲ ಕಿನಾರೆಯಲ್ಲಿ ಶವ ಪತ್ತೆ

ull
Published on

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಫೈನಾನ್ಸ್‌ನವರ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕುಂಪಲ ಚೇತನನಗರ ನಿವಾಸಿ ವಿನೋದ್(49) ಮೃತರು. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಅವರು ಶುಕ್ರವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗಿದ್ದು ಬಳಿಕ ನಾಪತ್ತೆಯಾಗಿದ್ದರು. ಶನಿವಾರ ಸೋಮೇಶ್ವರ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮೃತ ದೇಹವನ್ನು ಕಂಡ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಗುರುತು ಪತ್ತೆ ಹಚ್ಚಿದ್ದರು. ಮೃತರು ಮಕ್ಕಳ ಶಿಕ್ಷಣಕ್ಕಾಗಿ ಫೈನಾನ್ಸ್‌ನಿಂದ ಸಾಲ ಪಡೆದಿದ್ದು, ಮರು ಪಾವತಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಕಾರಣ ಬೇಸತ್ತು ಕೃತ್ಯ ಎಸಗಿರುವ ಶಂಕೆ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತರು ಪತ್ನಿ, ಇಬ್ಬರುಪುತ್ರಿಯರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net