ಭಟ್ಕಳ: ತಾಲೂಕಿನ ಅಳ್ವೇಕೋಡಿ ಬಂದರಿನಿಂದ ಮಂಗಳವಾರ ಮೀನುಗಾರಿಕೆಗೆ ತೆರಳಲು ಬೋಟಿನಿಂದ ಬೋಟಿಗೆ ದಾಟುವಾಗ ಆಕಸ್ಮಿಕ ಕಾಲು ಜಾರಿ ಬಿದ್ದು ಕಣ್ಮರೆಯಾಗಿದ್ದ ಮೀನುಗಾರನ ಶವ ಗುರುವಾರ ಅಳ್ವೆಕೋಡಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಜಾರ್ಖಂಡ ರಾಜ್ಯದ ಸಿಂಬೆಗಾ ಕುಲಕೇರ ನಿವಾಸಿ ಬಂದೂ ಬತ್ರಾ ಬಯ್ಯಾ (31) ಮೃತ ಮೀನುಗಾರ. ಮಂಗಳವಾರ ಸಂಜೆ ಮೀನುಗಾರಿಕೆಗೆ ತೆರಳುವಾಗ ಕಾಲು ಜಾರಿ ಸಮುದ್ರದಲ್ಲಿ ಬಿದ್ದು ನಾಪತ್ತೆಯಾಗಿದ್ದರು.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.