ಕಾಂತಮಂಗಲ ಶಾಲಾ ಬಳಿ ಯುವಕನ ಶವ ಪತ್ತೆ: ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ

web - sulya kole
ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗುಲಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗುಲಿಯಲ್ಲಿ ಅಪರಿಚಿತ ಯುವಕನೋರ್ವನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ರೀತಿಯಲ್ಲಿ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಸುಮಾರು ನಲ್ವತ್ತು ವರ್ಷದ ವ್ಯಕ್ತಿಯಾಗಿದ್ದು, ಬೆಳಗ್ಗೆ ಶಾಲಾ ಜಗುಲಿಯಲ್ಲಿ ರಕ್ತದ ಮಡುವಿನಲ್ಲಿ ಶವ ಕಾಣಸಿಕ್ಕಿದೆ. ಶವದ ಪಕ್ಕದಲ್ಲಿ ಮೊಬೈಲ್ ಸಿಮ್ ಕಾರ್ಡೊಂದು ದೊರಕಿದ್ದು, ಅದನ್ನು ಮೊಬೈಲ್‌ಗೆ ಹಾಕಿದಾಗ ಶೇಷಪ್ಪ ಪಂಜ ಎಂಬ ಹೆಸರು ಬರುತ್ತಿತ್ತೆಂದು ಹೇಳಲಾಗಿದ್ದು, ಈ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್‌ಪಿ ಅರುಣ್ ನಾಗೇಗೌಡ, ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಕೆ., ಸುಳ್ಯದ ಪ್ರಭಾರ ಎಸ್‌ಐ ಮಹೇಶ್, ಪೂಜಾ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net