More

    ಸಿಬ್ಬಂದಿ ಸೇರಿ 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ಇರಾನ್​ನಲ್ಲಿ ಪತನ

    ಬಾಗ್ದಾದ್​: 180 ಪ್ರಯಾಣಿಕರು ಮತ್ತು ಸಿಬ್ಬಂದಿ ಹೊತ್ತು ಸಾಗುತ್ತಿದ್ದ ಬೋಯಿಂಗ್​ ಸಿಒ.737 ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ಇರಾನ್​ನಲ್ಲಿ ಪತನವಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

    ವಿಮಾನವು ಉಕ್ರೇನ್​ಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಫ್ಲೈಟ್​ರಾಡರ್24​ ವೆಬ್​ಸೈಟ್​ ಪ್ರಕಾರ ಉಕ್ರೇನ್​ ಅಂತಾರಾಷ್ಟ್ರೀಯ ವಿಮಾನವು ತೆಹ್ರಾನ್​ನ ಇಮಾಮ್​ ಖೊಮೆನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬುಧವಾರ ಬೆಳಗ್ಗೆ ಬಿಟ್ಟು ಉಕ್ರೇನ್​ನ ಕೈವ್‌ ಬೋರಿಸ್‌ಪಿಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. ಆದರೆ, ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಕ ಸಮಸ್ಯೆಯಿಂದ ಪತನವಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

    ಪತನದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಇನ್ನಷ್ಟು ಸಿಬ್ಬಂದಿಯನ್ನು ಕಳುಹಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆಲ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ಇರಾನ್​ನ ತುರ್ತುಸೇವೆ ಮುಖ್ಯಸ್ಥ ಪಿರ್ಹೊಸೈನ್​ ಕೌಲಿವ್ಯಾಂಡ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪ್ರಾಣಹಾನಿ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

    ಅಕ್ಟೋಬರ್ 2018ರಲ್ಲಿ ಹಾಗೂ ಕಳೆದ ಮಾರ್ಚ್​ ತಿಂಗಳಲ್ಲಿ ನಡೆದ ವಿಮಾನ ಪತನದಲ್ಲಿ 350 ಮಂದಿ ಸಾವಿಗೀಡಾಗಿದ್ದರು. ಈ ಘಟನೆಗಳಿಂದ ಬೋಯಿಂಗ್​ ವಿಮಾನ ಸಂಸ್ಥೆಯು ಸಂಕಷ್ಟ ಎದುರಿಸುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts