More

    ನವೆಂಬರ್‌ನಿಂದ ಕೆಂಪು ಕುಚ್ಚಲಕ್ಕಿ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

    ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಲು ಬೇಡಿಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅನುಮತಿ ಪಡೆದು ನವೆಂಬರ್‌ನಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಗುರುವಾರ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಭೆಯಲ್ಲಿ ಮಾತನಾಡಿದರು.
    ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯವಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಚಿಂತನೆ ನಡೆಸಲಾಗಿದೆ ಎಂದರು.

    ಕೆಂಪು ಕುಚ್ಚಲಕ್ಕಿಯ ಒಟ್ಟು ಬೇಡಿಕೆ ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

    ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ನಿಗಮ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts