More

    ಮುಂದಿನ ವರ್ಷದಿಂದ ಕರಾವಳಿಗೆ ಕುಚಲಕ್ಕಿ ವಿತರಿಸಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಕುಚಲಕ್ಕಿ ಊಟ. ಈ ಭಾಗದ ಜನರಿಗೆ ಮುಂದಿನ ವರ್ಷದಿಂದಲೇ ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ವಿಧಾನಸೌಧದಲ್ಲಿ ಈ ಕುರಿತು ಗುರುವಾರ ಹಿರಿಯ ಅಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ವಿಷಯ ಸಂಬಂಧಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಶೀಘ್ರದಲ್ಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಲಾಗುವುದು.

    ಕುಚಲಕ್ಕಿ ಉಭಯ ಜಿಲ್ಲೆಗಳ ಜನರ ಬಹುದಿನಗಳ ಬೇಡಿಕೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೆ ಕೇರಳಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದರು.

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಕವಲ್ಲಿ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಸಭೆಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts