ಮುಂಬೈ: ಆರ್. ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರದ ಟ್ರೇಲರ್ ಶನಿವಾರವಷ್ಟೇ ಬಿಡುಗಡೆಯಾಗಿದೆ. ‘ಬಾಲಿವುಡ್ ಶೆಹನ್ಷಾ’ ಎಂದೇ ಖ್ಯಾತರಾಗಿರುವ ಅಮಿತಾಭ್ ಬಚ್ಚನ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದರ ಟ್ರೇಲರ್ನ್ನು ಅವರು ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ, ಮೆಚ್ಚುಗೆಯ ಮಾತುಗಳನ್ನಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಇದನ್ನೂ ಓದಿ: ಮತ್ತೆ ಬರಲಿದ್ದಾನೆ ‘ಕೊಡೆಮುರುಗ’; ಮಾ.10ಕ್ಕೆ ಮರುಬಿಡುಗಡೆ
ಬರೀ ಅಮಿತಾಭ್ ಮಾತ್ರವಲ್ಲ, ಬಾಲಿವುಡ್ನ ಹಲವು ನಟ-ನಟಿಯರು ಮತ್ತು ತಂತ್ರಜ್ನರು ಟ್ರೇಲರ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಜಯ್ ದೇವಗನ್, ರಾಕೇಶ್ ರೋಶನ್, ಮನೋಜ್ ಬಾಜಪೇಯಿ, ಶ್ರೇಯಸ್ ತಲ್ಪಾಡೆ, ಕಶ್ಮೀರಾ ಶಾ, ರೋನಿತ್ ರಾಯ್, ಮಧುರ್ ಭಂಡಾರ್ಕರ್, ಮೀರಾ ಚೋಪ್ರಾ, ಕುನಾಲ್ ಕೋಹ್ಲಿ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಿಪಡಿಸಿದ್ದಾರೆ.
‘ಕಬ್ಜಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶಿವರಾಜ್ಕುಮಾರ್, ಶ್ರೀಯಾ ಶರಣ್, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ನವಾಬ್ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬ್ಲ್ಯಾಕ್‌ಮೇಲ್ ಮಾಡ್ತಿದ್ದಾಳೆಂದು ಪತ್ನಿ ವಿರುದ್ಧ ಕಿಡಿಕಾರಿದ ನಟ ನವಾಜುದ್ದೀನ್ ಸಿದ್ದಿಕಿ
‘ಕಬ್ಜ’ ಚಿತ್ರವು ಮಾರ್ಚ್ 17ರಂದು ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಶ್ರೀ ಸಿದ್ಧೇಶ್ವರ ಎಂಟರ್ಪ್ರೈಸಸ್ನಡಿ ಆರ್. ಚಂದ್ರು ನಿರ್ಮಿಸುತ್ತಿದ್ದು, ರವಿ ಬಸ್ರೂರು ಅವರ ಸಂಗೀತ ಮತ್ತು ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.