ಮಂಗಳವಾರ ರಾತ್ರಿ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು, ಅವರು ಕುಸಿದು ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬದವರ ಪ್ರಕಾರ, ತಲೆ ಸುತ್ತಿ ಬಿದ್ದ ಪರಿಣಾಮ ಗಂಭೀರ ಗಾಯವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಅವರನ್ನು ಮೃತರೆಂದು ಘೋಷಿಸಿದ್ದಾರೆ.ಕೆಲವು ವರದಿಗಳ ಪ್ರಕಾರ, ಹೃದಯಾಘಾತವೂ ಸಾವಿಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.