2023 ರಲ್ಲಿ ಹೊಸವರ್ಷದ ಮುನ್ನಾದಿನದ ಪಾರ್ಟಿಯಲ್ಲಿ ವಿಜಯ್ ವರ್ಮಾ ಮತ್ತು ತಮನ್ನಾ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಾಗ ಅವರು ಪರಿಸ್ಪರ ಪ್ರೀತಿಸುತ್ತಿದ್ದಾರೆ ಎಂಬ ವದಂತಿಗಳು ಹುಟ್ಟುಕೊಂಡವು. ಅಂತಿಮವಾಗಿ ಲಸ್ಟ್ ಸ್ಟೋರೀಸ್ 2 ಪ್ರಚಾರದ ಸಮಯದಲ್ಲಿ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದರು. ನಂತರ ಜೋಡಿ ಕಾರ್ಯಕ್ರಮಗಳು, ಪ್ರದರ್ಶನಗಳು, ಡೇಟ್ ನೈಟ್‌ಗಳು ಮತ್ತು ಸಮಾರಂಭಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲು ಪ್ರಾರಂಭಿಸಿದರು (ಏಜೆನ್ಸೀಸ್).