ಹಿರಿಯ ನಟ ಧರ್ಮೇಂದ್ರ ಅವರು ಕೆಲವು ತಿಂಗಳುಗಳ ಹಿಂದೆ ಭಾರೀ ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಾದ ಬಳಿಕ ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ನವೆಂಬರ್ 24 ರಂದು ತಮ್ಮ 89 ನೇ ವಯಸ್ಸಿನಲ್ಲಿ ನಿಧನರಾದರು. ತಮ್ಮ ಇಬ್ಬರು ಪತ್ನಿಯರಾದ ಪ್ರಕಾಶ್ ಕೌರ್ ಮತ್ತು ಹೇಮಾ ಮಾಲಿನಿ ಮತ್ತು ಸನ್ನಿ ಡಿಯೋಲ್, ಬಾಬಿ ಡಿಯೋಲ್ ಮತ್ತು ಇಶಾ ಡಿಯೋಲ್ ಸೇರಿದಂತೆ ಆರು ಮಕ್ಕಳನ್ನು ಅಗಲಿದ್ದಾರೆ. ಅವರ ಅಗಲಿಕೆಯ ನಂತರ ಅನೇಕ ಸೆಲೆಬ್ರಿಟಿಗಳು ಅವರಿಗೆ ಸಂತಾಪ ಸೂಚಿಸಿದರು (ಏಜೆನ್ಸೀಸ್).