ನ್ಯೂಯಾರ್ಕ್: ಇತ್ತೀಚೆಗಷ್ಟೇ, ನಿತೀಶ್ ತಿವಾರಿ ನಿರ್ದೇಶಿಸುತ್ತಿರುವ ಹಾಗೂ ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್ ಬಿಡುಗಡೆಗೊಂಡಿತು. ಇದಕ್ಕೆ ಅನೇಕ ಸಿನಿಪ್ರಿಯರಿಂದ ಮೆಚ್ಚುಗೆಗಳು ವ್ಯಕ್ತವಾದರೆ, ಕೆಲವರು ವಿಎಫ್ಎಕ್ಸ್ ಕೆಲಸಗಳನ್ನು ಟೀಕಿಸಿದರು. ಇದೆಲ್ಲದರ ಮಧ್ಯೆ, ಚಿತ್ರದ ಕಾರ್ಯಕ್ರಮದಲ್ಲಿ ರಣಬೀರ್ ಹೇಳಿದ ಮಾತು ಸದ್ಯ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.