ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ, ಸದ್ಯ ರಣವೀರ್ ಸಿಂಗ್ ತಮ್ಮ ಸ್ಪೈ ಥ್ರಿಲ್ಲರ್ ಧುರಂಧರ್ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿ, 1000 ಕೋಟಿ ರೂ. ಗಳಿಸಿದ್ದು, ಜಾಗತಿಕವಾಗಿ 1300 ರೂ.ಗಳನ್ನು ದಾಟಿದೆ. ಇದೇ ಖುಷಿಯಲ್ಲಿ ಮುಂದಿನ ಮಾರ್ಚ್ 19 ರಂದು ಈ ಸಿನಿಮಾದ ಮುಂದಿನ ಭಾಗ ತೆರೆಕಾಣಲಿದ್ದು, ಈ ಸಿನಿಮಾವು ಹಿಂದಿ, ಮಲಯಾಳಂ, ತೆಲುಗು, ತಮಿಳು ಮತ್ತು ಕನ್ನಡದಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಧುರಂಧರ್ ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದಾರೆ. ಆರ್ ಮಾಧವನ್, ಸಂಜಯ್ ದತ್ತ್, ಸಾರಾ ಅರ್ಜುನ್, ರಾಕೇಶ್ ಬೇಡಿ, ಅರ್ಜುನ್ ರಾಂಪಾಲ್ ಪ್ರಮುಖ ತಾರಾಗಣದಲ್ಲಿದ್ದಾರೆ, (ಏಜನ್ಸೀಸ್).