ಈ ವರ್ಷದ ಆರಂಭದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಾಗಿತ್ತು. ಸಾರ್ವಜನಿಕ ಸಮಾರಂಭವೊಂದರಲ್ಲಿ ರಣವೀರ್ ಸಿಂಗ್ ಅವರು ಮಾಡಿದ ಕೆಲವು ಸನ್ನೆಳು, ನೃತ್ಯದ ಶೈಲಿ ಮತ್ತು ಹೇಳಿಕೆಗಳು ಕರಾವಳಿ ಕರ್ನಾಟಕದ ಚಾವುಂಡಿ ದೈವ ಸಂಪ್ರದಾಯಕ್ಕೆ ಸಂಬಂಧಿಸಿದ ಧಾರ್ಮಿಕ ಭಾವನೆಗಳಿಗೆ ಅವಮಾನಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆದಾಗ್ಯೂ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಹಿನ್ನಲೆ ನಟನ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿಕೊಳ್ಳಲಾಗಿತ್ತು.