

Bombay High Court : ದೆಹಲಿಯಲ್ಲಿ ಬಾಂಬ್ ಬೆದರಿಕೆ ಬಂದ ಕೆಲವೇ ಗಂಟೆಗಳಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ಬಾಂಬ್ ಸ್ಪೋಟಿಸುವುದಾಗಿ ಸುದ್ದಿ ತಿಳಿದ ಕೂಡಲೇ ಅಲ್ಲಿರುವ ಸಿಬ್ಬಂದಿಗಳು ಭಯದಿಂದ ಜೀವ ಉಳಸಿಕೊಳ್ಳಲು ಓಡಿಬರುತ್ತಿರುವಂತ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ವರದಿಗಳ ಪ್ರಕಾರ, ಬೆದರಿಕೆ ಮೇಲ್ ಕಳುಹಿಸಿದವರು ನ್ಯಾಯಾಲಯದ ಆವರಣದಲ್ಲಿ ಮೂರು ಬಾಂಬ್ಗಳನ್ನು ಇಡಲಾಗಿದೆ ಮಧ್ಯಾಹ್ನ 2 ಗಂಟೆಯ ನಂತರ ಅವುಗಳನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಮಾಹಿತಿ ಬಂದ ಕೂಡಲೇ, ಎಲ್ಲಾ ನ್ಯಾಯಾಂಗ ಪ್ರಕ್ರಿಯೆಗಳು ಮತ್ತು ಆಡಳಿತಾತ್ಮಕ ಕೆಲಸಗಳನ್ನು ಕೂಡಲೇ ಸ್ಥಗಿತಗೊಳಿಸಿದ್ದು, ಅಲ್ಲಿರುವ ಸಿಒಬ್ಬಂದಿಗಳು ಹಾಗೂ ಜನರನ್ನು ಅಲ್ಲಿಂದ ಹೊರತರಲಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ತಂಡಗಳು ಬಾಂಬ್ ಇರುವ ಸ್ಥಳವನ್ನು ಹುಡುಕಾಟ ನಡೆಸುತ್ತಿದ್ದಾರೆ.
ಬೆದರಿಕೆಯ ಮೂಲಗಳನ್ನು ಪತ್ತೆ ಹಚ್ಚುವ ಸಲುವಾಗಿ ಸೈಬರ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಇನ್ನು ನ್ಯಾಯಾಧೀಶರು ಹಾಗೂ ಅಲ್ಲಿರುವ ಜನರನ್ನು ನ್ಯಾಯಾಲಯದಿಂದ ಹೊರಕರೆತಂದಿದ್ದು, ನ್ಯಾಯಾಲಯದ ಸುತ್ತಲೂ ಭಿಗಿಬಂದೋಬಸ್ತ್ ಮಾಡಲಾಗಿದೆ.
ಇಂದು ಮುಂಜಾನೆ ಈ ವಿಚಾರ ಬೆಳಕಿಗೆ ಬಂದಿದ್ದು, ಈ ವೇಳೆ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ ಕಲಾಪಗಳನ್ನು ನಿಲ್ಲಿಸಿ ಕಟ್ಟಡ ಖಾಲಿ ಮಾಡುವಂತೆ ಸೂಚನೆ ನೀಡಲಾಯಿತು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ನ್ಯಾಯಾಲಯದ ಸಂಪೂರ್ಣ ಕಟ್ಟಡವನ್ನು ಸುತ್ತುವರೆದು ಶೋಧ ಕಾರ್ಯವನ್ನು ನಡೆಸುತ್ತಿದೆ. (ಏಜೆನ್ಸೀಸ್)