ಬೆಂಗಳೂರಿಗೆ ಮೇಲಿಂದ ಮೇಲೆ ಬಾಂಬ್​ ಬೆದರಿಕೆ ಕರೆ; ವಿಶ್ವೇಶ್ವರಯ್ಯ ಮ್ಯೂಸಿಯಂ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್​ ಬೆದರಿಕೆ ಕರೆ

Bomb threat
Published on

ಬೆಂಗಳೂರು: ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಇದೀಗ ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಶುಕ್ರವಾರ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು ‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ. ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net