ದೆಹಲಿಯ ಐದು ಪ್ರಮುಖ ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ; ವಿದ್ಯಾರ್ಥಿಗಳ ಸ್ಥಳಾಂತರ| bomb-scare

BOMB SCQAD
Published on

ದ್ವಾರಕಾದ ಸೇಂಟ್ ಥಾಮಸ್ ಶಾಲೆ ಮತ್ತು ವಸಂತ್ ಕುಂಜ್‌ನ ವಸಂತ್ ವ್ಯಾಲಿ, ಹೌಜ್‌ ಖಾಸ್‌ನಲ್ಲಿರುವ ಮದರ್ ಇಂಟರ್‌ನ್ಯಾಷನಲ್, ಲೋಧಿ ಎಸ್ಟೇಟ್‌ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯ ಹಾಗೂ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಗ್ಲೋಬಲ್ ಶಾಲೆಗೆ ಇಂದು (16) ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.

ನವದೆಹಲಿ: ದೆಹಲಿಯ ಐದು ಪ್ರಮುಖ ಶಾಲೆಗಳಿಗೆ ಬಾಂಬ್​ ಬೆದರಿಕೆಯ ಸಂದೇಶ ಬಂದಿದ್ದು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಭಯವನ್ನು ಉಂಟುಮಾಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸೇಂಟ್ ಥಾಮಸ್‌ ಶಾಲೆಗೆ ಕಳೆದ 24 ಗಂಟೆಗಳಲ್ಲಿ ಎರಡನೇ ಬಾರಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇತರೆ ಉಳಿದ ಶಾಲೆಗಳಿಗೆ ಹತ್ತು ಬಾಂಬ್ ಬೆದರಿಕೆಯ ಇಮೇಲ್‌ಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಬೆದರಿಕೆ ಕರೆ ಬಂದ ಕೂಡಲೇ ಶಾಲಾ ಅಧಿಕಾರಿಗಳು, ಕಾನೂನು ಜಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸರು ಎರಡೂ ಸ್ಥಳಗಳಿಗೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಸೈಬರ್ ತಜ್ಞರನ್ನು ನಿಯೋಜಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.

(ಏಜೆನ್ಸೀಸ್)

ಶಾಲಾ ಕ್ಯಾಂಪಸ್‌ಗಳಲ್ಲಿ ಭದ್ರತಾ ತಂಡಗಳು ಸಂಪೂರ್ಣ ಶೋಧ ನಡೆಸಿವೆ. ಇಲ್ಲಿಯವರೆಗೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಮತ್ತು ಬೆದರಿಕೆ ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ. ತನಿಖೆ ಮುಂದುವರಿಯುವವರೆಗೆ ಪೋಷಕರು ಮತ್ತು ಸಾರ್ವಜನಿಕರು ಶಾಂತವಾಗಿರಲು ಅಧಿಕಾರಿಗಳು ಒತ್ತಾಯಿಸಿದ್ದಾರೆ. ರಾಜಧಾನಿಯ ಶಾಲೆಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆದ ಇದೇ ರೀತಿಯ ವಂಚನೆಗಳ ಸರಣಿಯ ನಂತರ ಈ ಘಟನೆ ನಡೆದಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಭದ್ರತೆ ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net