More

    ಬೆಂಗಳೂರಿನ ಐದು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

    ಆನೇಕಲ್: ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯಿಟ್ಟಿರುವ ಘಟನೆ ನಡೆದಿದ್ದು, ಬಾಂಬ್ ಸ್ಕ್ವಾಡ್ ಹಾಗು ಡಾಗ್ ಸ್ಕ್ವಾಡ್ ಸಿಬ್ಬಂದಿ ಸ್ಕೂಲ್ ಬಳಿ ಪರಿಶೀಲನೆ ನಡೆಸಿದ್ದಾರೆ.

    ಹುಸ್ಕೂರು ಬಳಿ ಇರುವ ಎಬಿನೇಜರ್ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಈ ಮೇಲೆ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದು, ತಕ್ಷಣ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವೌಡ್ ಸೇರಿದಂತೆ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

    ಶಾಲೆಯ ಸುತ್ತಮುತ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಸ್ಕೂಲ್ ನಲ್ಲಿ ಹೆಚ್ಚಿದ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಯ ಮುಂಭಾಗ ವಿದ್ಯಾರ್ಥಿಗಳ ಪೋಷಕರು ಆಗಮಿಸುತ್ತಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದಾರೆ.

    ಬಾಂಬ್ ಬೆದರಿಕೆ ಇಟ್ಟ ಶಾಲೆ:

    1. ಮಹದೇವಪುರದ ಗೋಪಾಲನ್ ಇಂಟರ್​​ನ್ಯಾಷನಲ್ ಶಾಲೆ
    2.ವರ್ತೂರಿನ ಡೆಲ್ಲಿ ಪಬ್ಲಿಕ್ ಸ್ಕೂಲ್
    3.ಮಾರತ್ತಹಳ್ಳಿಯ ನ್ಯೂ ಅಕಾಡೆಮಿ ಸ್ಕೂಲ್
    4. ಹೆಣ್ಣೂರಿನ ಸೇಂಟ್​ ವಿನ್ಸೆಂಟ್ ಪೌಲ್ ಶಾಲೆ
    5.ಗೋವಿಂದಪುರದ ಇಂಡಿಯನ್ ಪಬ್ಲಿಕ್ ಸ್ಕೂಲ್

    ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts