Ayodhya : ಇತ್ತೀಚೆಗೆ ಅಯೋಧ್ಯೆ ರಾಮ ಮಂದಿರದ ಮೇಲೆ ಪವಿತ್ರ ಕಳಶ ಪ್ರತಿಷ್ಟಾಪಿಸಲಾಗಿದೆ. ಇನ್ನೂ ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿರುವಾಗಲೇ ಇಮೇಲ್ ಮೂಲಕ ಬೆದರಿಕೆ ಕರೆ ನೀಡಲಾಗಿದೆ.

ಹೌದು ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಬೆನ್ನಲ್ಲೇ ದೇವಸ್ಥಾನದ ಸುತ್ತ ಪೊಲೀಸರು ಬಿಗಿ ಭದ್ರತಾ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಸೈಬರ್ ಪೊಲೀಸರು ಈ ಬೆದರಿಕೆ ಬಂದ ಮೂಲ ಪತ್ತೆ ಹಚ್ಚಿದ್ದಾರೆ. ಸೈಬರ್ ಪೊಲೀಸರ ಪ್ರಕಾರ ತಮಿಳುನಾಡಿನಿಂದ ಈ ಬೆದರಿಕೆ ಇಮೇಲ್ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಆತ ಯಾರೆಂಬುದರ ಬಗ್ಗೆ ಇನ್ನೂ ಮಾಹಿತಿ ಪತ್ತೆಯಾಗಿಲ್ಲ.
ಇದನ್ನೂ ಓದಿ: ಇನ್ಮುಂದೆ ಬ್ಲಿಂಕಿಟ್ನಿಂದ 10 ನಿಮಿಷದಲ್ಲಿ ಸಿಗಲಿವೆ ‘ಏರ್ಟೆಲ್’ ಸಿಮ್ಕಾರ್ಡ್ಗಳು: Airtel
ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ರಾಮ ಮಂದಿರಕ್ಕೆ ಬೆದರಿಕೆ ಬಂದ ನಂತರ ದೇವಾಲಯದ ಆವರಣದಲ್ಲಿ ಗದ್ದಲ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಸೈಬರ್ ಸೆಲ್ ಮಾಹಿತಿ ನೀಡಿದೆ. ಸೋಮವಾರ ರಾತ್ರಿ ರಾಮ ಜನ್ಮಭೂಮಿ ಟ್ರಸ್ಟ್‌ನ ಮೇಲ್‌ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ದೇವಾಲಯದ ಭದ್ರತೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ.
ಸಮಿತಿ ಅಧ್ಯಕ್ಷರು ಹೇಳಿದ್ದೇನು?
ಇನ್ನೂ ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮ ಮಂದಿರದ ಸುತ್ತಲೂ ಸುಮಾರು 4 ಕಿಲೋಮೀಟರ್ ಉದ್ದದ ಭದ್ರತಾ ಗೋಡೆಯನ್ನು ನಿರ್ಮಿಸಲಾಗುತ್ತಿದೆ. 18 ತಿಂಗಳಲ್ಲಿ ಇದನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಶ್ರೀ ರಾಮ ಜನ್ಮಭೂಮಿ ದೇವಾಲಯ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಸೋಮವಾರ ಸಮಿತಿಯ ಸಭೆಯ ಮೂರನೇ ದಿನದಂದು ರಾಮ ಮಂದಿರ ನಿರ್ಮಾಣದ ಕುರಿತು ನವೀಕರಣಗಳನ್ನು ಚರ್ಚಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
(ಏಜೆನ್ಸೀಸ್)