Bomb Threat : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

Taj West End
Published on

ಬೆಂಗಳೂರು:  ಬೆಂಗಳೂರಿನ  ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಹುಸಿ ಬಾಂಬ್ ಬೆದರಿಕೆ ( Bomb Threat ) ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್​ ಸ್ಕ್ವಾಡ್​ ಪರಿಶೀಲನೆ ನಡೆಸಿದರು.

ಬಾಂಬ್​ ಇಟ್ಟು ಸ್ಪೋಟಿಸುವುದಾಗಿ  ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ.

ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್​ ವೆಸ್ಟ್​ ಎಂಡ್​​ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ. ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net