ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ| threat

bomb threat
Published on

ಅಗ್ನಿಶಾಮಕ ಸೇವೆ, ಪೊಲೀಸ್ ತಂಡಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಆಗಮಿಸಿದ್ದು, ಪ್ರಸ್ತುತ ಕ್ಯಾಂಪಸ್‌ನಲ್ಲಿ ಸಂಪೂರ್ಣ ಶೋಧ ನಡೆಸಲಾಗುತ್ತಿದೆ ಎನ್ನಲಾಗಿದೆ. ಇ-ಮೇಲ್ ಐಡಿ ಮೂಲಕ ಅನೇಕ ಶಾಲೆಗಳಿಗೆ ಬೆದರಿಕೆ ಮೇಲ್ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನವದೆಹಲಿ; ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್) ಗೆ ಇಂದು (ಆ.18) ಬೆಳಂಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇನ್ನೂ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ದ್ವಾರಕಾದ ಸೆಕ್ಟರ್-4 ರಲ್ಲಿರುವ ಮಾಡರ್ನ್ ಕಾನ್ವೆಂಟ್ ಶಾಲೆ ಮತ್ತು ದ್ವಾರಕಾದ ಸೆಕ್ಟರ್ 10 ರಲ್ಲಿರುವ ಶ್ರೀರಾಮ್ ವರ್ಲ್ಡ್ ಶಾಲೆಗಳು ಈ ರೀತಿಯ ಬೆದರಿಕೆ ಬಂದಿರುವುದಾಗಿ ಹೇಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಕೂಡಲೇ ಶಾಲೆಗಳಿಗೆ ರಜೆ ಘೋಷಿಸುವಂತೆ ಸೂಚಿಸಿದ್ದಾರೆ. ಇಡೀ ಶಾಲಾ ಆವರಣವನ್ನು ತೀವ್ರವಾಗಿ ಶೋಧ ನಡೆಸಲಾಗುತ್ತಿದೆ.

40 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

(ಏಜೆನ್ಸೀಸ್)

ಜುಲೈನಲ್ಲಿ ಬೆಂಗಳೂರಿನಾದ್ಯಂತ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಭದ್ರತಾ ಭಯದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ಘಟಕಗಳು ಮತ್ತು ತುರ್ತು ಸೇವೆಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದವು. ಆರ್.ಆರ್. ನಗರ ಮತ್ತು ಕೆಂಗೇರಿಯಂತಹ ಪ್ರದೇಶಗಳ ಶಾಲೆಗಳು ಗುರಿಯಾಗಿಸಿಕೊಂಡು ಈ ಬೆದರಿಕೆ ನೀಡಲಾಗಿತ್ತು. ಆದಾಗ್ಯೂ, ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net