ಬಾಂಬೆ ಬೇಗಮ್ಸ್ ವೆಬ್‌ಸರಣಿ ನಿಷೇಧಿಸುವಂತೆ ಕೇಂದ್ರ, ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯ

ಉಡುಪಿ: ನೆಟ್‌ಫ್ಲಿಕ್ಸ್ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರವಾಗುತ್ತಿರುವ ಬಾಂಬೆ ಬೇಗಮ್ಸ್ ವೆಬ್ ಸರಣಿಯನ್ನು ತಕ್ಷಣ ನಿಷೇಧಿಸಬೇಕು ಎಂದು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಈ ವೆಬ್ ಸರಣಿಯಲ್ಲಿ ಶಾಲೆಯ ವಿದ್ಯಾರ್ಥಿಗಳು ಅಶ್ಲೀಲ ಚಿತ್ರಗಳನ್ನು ನೋಡುವುದು, ಮಕ್ಕಳು ಮಾದಕ ಪದಾರ್ಥ ಸೇವನೆ ಮಾಡುವುದು ಇತ್ಯಾದಿ ಪ್ರಚೋದನಕಾರಿ ಹಾಗೂ ಆಕ್ಷೆಪಾರ್ಹ ದೃಶ್ಯ ತೋರಿಸಲಾಗಿದೆ. ಸಮಾಜದಲ್ಲಿ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಗಳು ಹೆಚ್ಚುತ್ತಿರುವ ಸಮಯದಲ್ಲಿ, ಈ ವೆಬ್ಸರಣಿ ಪ್ರಸಾರ ಮಾಡುವುದೆಂದರೆ ಮಕ್ಕಳ ಮೇಲೆ ದೌರ್ಜನ್ಯವನ್ನು ಉತ್ತೇಜಿಸುವುದಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ವೆಬ್ ಸರಣಿ ನಿಷೇಧಿಸಬೇಕು. ಅದೇ ರೀತಿ ಈ ವೆಬ್ ಸರಣಿ ನಿರ್ಮಾಪಕರು, ಅದನ್ನು ಪ್ರಸಾರ ಮಾಡುವ ನೆಟ್‌ಫ್ಲಿಕ್ಸ್ ವಿರುದ್ಧ ಬಾಲನ್ಯಾಯ ಕಾಯ್ದೆ (ಪಾಲನೆ ಮತ್ತು ಪೋಷಣೆ) 2015ರ 77 ನೆ ಕಲಂನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಅಪರಾಧ ದಾಖಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಸಮಿತಿ ವತಿಯಿಂದ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ ಜಾವಡೇಕರ್, ಮಹಾರಾಷ್ಟ್ರ ಗೃಹ ಸಚಿವ ದಿಲೀಪ ವಳಸೆ-ಪಾಟೀಲ್ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣ ಆಯೋಗಕ್ಕೆ ಇ- ಮೇಲ್ ಕಳುಹಿಸಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಡಾ.ಉದಯ ಧುರಿ ಒತ್ತಾಯಿಸಿದ್ದಾರೆ.

Share This Article

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…