ವಿಪಕ್ಷ ನಾಯಕ ಆಯ್ಕೆ ವಿಳಂಬದ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

Basavaraj Bommai (1)
Published on

ಬೆಂಗಳೂರು: ಇಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ನಡೆಯುತ್ತಿರುವ ವಿಳಂಬಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿತ್ತು. ಆದರೆ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗದೇ ಇದ್ದು ಸುದ್ದಿಗಾರರು ಪ್ರಶ್ನಿಸಿದಾಗ ವಿಳಂಬ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಈ ಸಂದರ್ಭ ಅವರು "ಯಾವುದೇ ರೀತಿಯ ಗೊಂದಲ ಇಲ್ಲ. ವಿಪಕ್ಷ ನಾಯಕ ಆಯ್ಕೆ ವಿಳಂಬ ಆಗಿಲ್ಲ. ಈ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ಚರ್ಚೆಗೆ ಬಂದಿಲ್ಲ ಅಷ್ಟೇ. ಜುಲೈ 3ರಿಂದ ಅಧಿವೇಶನ ಶುರುವಾಗಲಿದ್ದು, ಅದಕ್ಕೂ ಮೊದಲು ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ" ಎಂದು ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಅನೇಕ ಕಾಂಗ್ರೆಸ್ ನಾಯಕರು, ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಬಿಜೆಪಿ ಕಾಲೆಳೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net