ಕ್ರೀಡೆಯಿಂದ ಬಾಂಧವ್ಯ ವೃದ್ಧಿ: ಶಾಸಕ ರಾಜೇಶ್ ನಾಕ್ ಅನಿಸಿಕೆ

Btw_Sports
Published on

ಬಂಟ್ವಾಳ: ಕ್ರೀಡೆಯಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಕಾಪಾಡಲು ಸಾಧ್ಯವಿದೆ. ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಇತರ ಸಂಘಟನೆಗಳ ಸಹಕಾರದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟ ತಾಲೂಕಿನ ಎಲ್ಲ ವೃತ್ತಿಪರ ಸಂಘಟನೆಗಳನ್ನು ಸಂಘಟಿಸುವ ಮೂಲಕ ಪರಸ್ಪರ ಪ್ರೀತಿ, ಬಾಂಧವ್ಯವನ್ನು ವೃದ್ಧಿಸಿದೆ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.

ಲಯನ್ಸ್ ಕ್ಲಬ್ ಬಂಟ್ವಾಳ ನೇತೃತ್ವದಲ್ಲಿ ರಾರಾಸಂ ಫೌಂಡೇಷನ್ ಬಂಟ್ವಾಳ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದೊಂದಿಗೆ ಭಾನುವಾರ ಬಂಟ್ವಾಳದ ಎಸ್‌ವಿಎಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಮಾತನಾಡಿದರು.

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ.ಭಟ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ.ಬಿ.ವಸಂತ ಬಾಳಿಗಾ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಲಯನ್ಸ್ ಪೂರ್ವ ಗವರ್ನರ್ ಸಂಜಿತ್ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರೋಟರಿ ಪೂರ್ವ ಸಹಾಯಕ ಗವರ್ನರ್ ರಾಘವೇದ್ರ ಭಟ್, ಉದ್ಯಮಿ ಜಗನ್ನಾಥ ಚೌಟ, ವೈದ್ಯ ಡಾ.ಪ್ರದೀಪ್ ಕುಮಾರ್ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕ್ಯಾಸ್ಟಲಿನೋ, ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ, ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗ್ಯಾರೇಜು ಮಾಲೀಕರ ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಬಹುಮಾನ ವಿತರಿಸಿದರು. ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಲಯನ್ಸ್ ಪೂರ್ವ ಜಿಲ್ಲಾ ಗವರ್ನರ್ ವಸಂತಕುಮಾರ್ ಶೆಟ್ಟಿ, ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಯೂಜಿನ್ ಲೋಬೊ, ಉದ್ಯಮಿ ವಾಸುದೇವ ಭಟ್, ಉಪತಹಸೀಲ್ದಾರ್ ದಿವಾಕರ ಮುಗುಳಿ, ಲಯನ್ಸ್ ಜಿಲ್ಲಾ ಕಾರ್ಯಕ್ರಮಗಳ ಪ್ರಧಾನ ಸಂಯೋಜಕ ರಾಧಾಕೃಷ್ಣ ರೈ ಉಮಿಯ, ಮನೋರಂಜನ್ ಕರೈ, ಬಿ.ರಾಮಚಂದ್ರ ರಾವ್, ಲೋಕೇಶ್ ಸುವರ್ಣ ಕಿನ್ನಿಬೆಟ್ಟು , ಜೆ.ಡಿ.ಬಾಯ್ಸ ಸ್ಥಾಪಕಾಧ್ಯಕ್ಷ ಪೃಥ್ವಿರಾಜ್ ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾಟದಲ್ಲಿ ಕಂದಾಯ ಇಲಾಖೆಯ ತಂಡ ವಿನ್ನರ್ ಹಾಗೂ ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘ ರನ್ನರ್‌ಅಪ್ ಬಹುಮಾನ ಗೆದ್ದುಕೊಂಡಿತು. ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ತಪೋಧನ್ ಶೆಟ್ಟಿ ವಂದಿಸಿದರು, ಪತ್ರಕರ್ತ ಸಂದೀಪ್ ಸಾಲ್ಯಾನ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net