More

    ದೆಹಲಿಯಲ್ಲಿ ಬಿಡುಗಡೆಯಾಯ್ತು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಕುರಿತ ಪುಸ್ತಕ

    ನವದೆಹಲಿ: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಜೀವನ ಆಧರಿಸಿ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಬರೆದಿರುವ ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್​ಪ್ಲೋರ್ಡ್​ ಲೈಫ್ ಆಫ್ ಎಚ್.ಡಿ.ದೇವೇಗೌಡʼ (Furrows in a Field: The Unexplored Life of H.D. Deve Gowda) ಕೃತಿಯನ್ನು ದೇಶದ ಖ್ಯಾತ ನ್ಯಾಯವಾದಿ ಫಾಲಿ ಎಫ್. ನಾರಿಮನ್ ಅವರು ಇಂದು ದೆಹಲಿಯಲ್ಲಿ ಲೋಕಾರ್ಪಣೆ ಮಾಡಿದರು.

    ಇಲ್ಲಿನ ಮಲ್ಟಿಪರ್ಪಸ್​ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆನ್​​ಲೈನ್​ ವೇದಿಕೆ ಮೂಲಕ ನಾರಿಮನ್ ಅವರು ಕೃತಿಯನ್ನು ದೇವೇಗೌಡರ ಸಮಕ್ಷಮದಲ್ಲಿ ಬಿಡುಗಡೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಾರಿಮನ್, ದೇವೇಗೌಡರ ಸುದೀರ್ಘ ರಾಜಕೀಯ ಜೀವನದ ಮಜಲುಗಳನ್ನು ಮೆಲುಕು ಹಾಕಿದರು. ಮುಖ್ಯವಾಗಿ ನೆರೆ ರಾಜ್ಯಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗಿದ್ದ ಕೃಷ್ಣಾ ಮತ್ತು ಕಾವೇರಿ ಕೊಳ್ಳಗಳ ಜಲವಿವಾದಗಳ ಬಗ್ಗೆ ಗೌಡರು ಕೈಗೊಂಡ ಕಠಿಣ ಕ್ರಮಗಳನ್ನು ಪ್ರಮುಖವಾಗಿ ಉಲ್ಲೇಖ ಮಾಡಿದರು.

    ಇದನ್ನೂ ಓದಿ: ನಾಳೆಯೇ ಮೇಲ್ಮನೆ ಚುನಾವಣೆ ಮತ ಎಣಿಕೆ; ಆದರೆ ಕೆಲವೆಡೆ ಫಲಿತಾಂಶ ಬೇಗ ಸಿಗೋದೇ ಅನುಮಾನ…

    60 ವರ್ಷಗಳ ಸುದೀರ್ಘ ರಾಜಕೀಯ ಜೀವನವುಳ್ಳ ದೇವೇಗೌಡರನ್ನು ಪುಸ್ತಕದಲ್ಲಿ ದೊಡ್ಡ ಜೀವ ಎಂದು ಕರೆಯಲಾಗಿದೆ. ದೊಡ್ಡ ಜೀವದ ಜತೆ ಸಂಭ್ರಮಿಸುತ್ತಿದ್ದೇವೆ ಎಂದು ಬರೆಯಲಾಗಿದೆ. ಆದರೆ, ಅವರು ತಾವು ರಾಜಕೀಯ ಜೀವನ ಆರಂಭಿಸಿದಾಗ ಅವರಿಗೆ ತಾವೊಬ್ಬ ದೊಡ್ಡ ಜೀವ ಆಗುತ್ತೇನೆಂಬ ಕಲ್ಪನೆಯೇ ಇರಲಿಲ್ಲ. ಆದರೆ ದೇವೇಗೌಡರು ಹಾಗೆ ಬೆಳೆದು ಸಾಧಿಸಿದರು ಎಂದು ನಾರಿಮನ್ ಅಭಿಪ್ರಾಯಪಟ್ಟರು.

    1962ರಲ್ಲಿ ಪಕ್ಷೇತರ ಶಾಸಕರಾಗಿ ಗೌಡರು ರಾಜ್ಯ ವಿಧಾನಸಭೆಗೆ ಕಾಲಿಟ್ಟ ಕೂಡಲೇ ಅವರು ಪ್ರಸ್ತಾಪ ಮಾಡಿದ್ದು, ರಾಜ್ಯಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ, ಜತೆಗೆ ಒಂದು ನಿರ್ಣಯವನ್ನೂ ಮಂಡಿಸಿದರು. ಅದಾದ ಮೇಲೆ ಕರ್ನಾಟಕ ಸರ್ಕಾರ ಕಾವೇರಿ ಕೊಳ್ಳದ ತನ್ನ ಪಾಲಿನ ನೀರನ್ನು ಸಮರ್ಪಕವಾಗಿ ಬಳಿಸಿಕೊಳ್ಳುವ ನಿರ್ಧಾರ ಕೈಗೊಂಡಿತು ಎಂದು ಅವರು ವಿವರಿಸಿದರು.

    ಇದನ್ನೂ ಓದಿ: ಹತ್ತು ವರ್ಷದ ಮಗನನ್ನು ಸಂಪ್​ಗೆ ಎಸೆದು ಕೊಂದು, ಆತ್ಮಹತ್ಯೆ ಮಾಡಿಕೊಂಡ ತಂದೆ…

    ಆ ನಿರ್ಣಯ ಮಂಡಿಸಿ ಗೌಡರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ನಾರಿಮನ್, ಹಾಸನ, ಮೈಸೂರು, ಕೊಡಗು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳ ನೀರಿನ ಬವಣೆಯನ್ನು ಹಾಗೂ ಕಾವೇರಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವನ್ನು ದೇವೇಗೌಡರು ಒತ್ತಿ ಹೇಳಿದ್ದರು. ಅವರ ಮಾತುಗಳನ್ನು ಹಿರಿಯ ನಾಯಕರಾದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರುಗಳೆಲ್ಲ ಆಲಿಸಿ ನೀರಿನ ಬಳಕೆ ಬಗ್ಗೆ ನಿರ್ಧಾರ ಕೈಗೊಂಡಿದ್ದರು ಎಂದರು.

    ಇಷ್ಟೇ ಅಲ್ಲದೆ, ರಾಜ್ಯದಲ್ಲಿ ಬಲಿಷ್ಠ ಸಮುದಾಯಗಳ ನಡುವೆ ನಡೆಯುತ್ತಿದ್ದ ರಾಜಕೀಯ ಮೇಲಾಟ, ಕೊನೆಗೆ ಹೋರಾಟಕ್ಕೆ ಮನ್ನಣೆ ಸಿಕ್ಕಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿಯಾದ ಘಟನಾವಳಿಗಳ ಬಗ್ಗೆ ನಾರಿಮನ್ ಅವರು ಪ್ರಸ್ತಾಪ ಮಾಡಿದರು.

    ಫಾರೂಕ್ ಅಬ್ದುಲ್ಲಾ ಕಂಬನಿ: ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಕಣಿವೆಯಲ್ಲಿ ಬಹಳ ದುಸ್ತರ ಸಂದರ್ಭವಿದ್ದಾಗ ಗೌಡರು ಈ ದೇಶದ ಪ್ರಧಾನಿ ಆಗಿದ್ದರು. ಆಗ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ವಿಪರೀತ ವಿಷಮವಾಗಿತ್ತು ಎಂದರು.

    ಇದನ್ನೂ ಓದಿ: ಅನೈತಿಕ ಸಂಬಂಧ, ಗಂಡನೇ ಕೊಂದ!?; ಜೋಡಿ ಕೊಲೆ ಪ್ರಕರಣ, ಒಬ್ಬನ ಬಂಧನ…

    ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಗೌಡರು ಬಹುದೊಡ್ಡ ರಿಸ್ಕ್ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅನೇಕ ಸಲ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದೆ. ಅಂಥ ಕಠಿಣ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಗೌಡರು ನಿರ್ವಹಿಸಿದ ರೀತಿ ಕೆಚ್ಚೆದೆಯಿಂದ ಕೂಡಿತ್ತು. ಆಗ ದೇವೇಗೌಡರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದರು. ಅದು ನನ್ನ ಪಾಲಿಗೆ ಹೊಸ ಆರಂಭ. ಆಗ ಗೌಡರ ದೃಢ ನಿರ್ಧಾರದಿಂದ ಅಷ್ಟು ವಿಷಮ ಸ್ಥಿತಿಯಲ್ಲಿದ್ದ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆದು ನಾನು ಅಧಿಕಾರಕ್ಕೆ ಬಂದೆ ಎಂದು ಫಾರೂಕ್ ಅಬ್ದುಲ್ಲಾ ಗದ್ಗದಿತರಾದರು. ಈ ಕಾರಣಕ್ಕೆ ಜಮ್ಮು, ಕಾಶ್ಮೀರ, ಲಡಾಖ್ ಜನರು ಎಂದೆಂದಿಗೂ ದೇವೇಗೌಡರಿಗೆ ಋಣಿಯಾಗಿರುತ್ತಾರೆಂದು ಅವರು ಕಣ್ಣಂಚಿನಲ್ಲಿ ನೀರು ತುಂಬಿಕೊಂಡೇ ಹೇಳಿದರು.

    ಇದನ್ನೂ ಓದಿ: ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಪತ್ನಿ ವಾಪಸ್ ಬಂದಿಲ್ಲ ಎಂದು ಪತಿ ಆತ್ಮಹತ್ಯೆ

    ಗೌಡರು ಮತ್ತು ಕೃತಿಯ ಬಗ್ಗೆ ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಮಾತನಾಡಿದರು. ಸಿಪಿಎಂ ಮುಖಂಡ ಸೀತಾರಾಂ ಯೆಚೂರಿಯವರು ಗೌಡರ ಜತೆಗಿನ ತಮ್ಮ ಬಾಂಧವ್ಯವನ್ನು ಮೆಲುಕು ಹಾಕಿದರು. ಲೇಖಕ ಸುಗತ ಶ್ರೀನಿವಾಸ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.

    ದೇವೇಗೌಡರ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಪಿ.ಚಿದಂಬರಂ, ಜನರಲ್ ಧಿಲ್ಲೋನ್, ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶ್ರೀಮತಿ ಚನ್ನಮ್ಮ ದೇವೇಗೌಡರು ಸೇರಿ ಅನೇಕ ಗಣ್ಯರು, ಹಿತೈಷಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ಅಂದು ನಿಧಿ ಸುಬ್ಬಯ್ಯ, ಇಂದು ಆವಂತಿಕಾ ಶೆಟ್ಟಿ; ಇಬ್ಬರದ್ದೂ ಬಹುತೇಕ ಒಂದೇ ಥರ ಬೇಸರ!

    ವಿಶ್ವದಲ್ಲೇ ಇದು ಒಮಿಕ್ರಾನ್​ನಿಂದಾದ ಮೊದಲ ಸಾವು; ರೂಪಾಂತರಿ ವೈರಸ್​ ಇದೀಗ ಮತ್ತಷ್ಟು ಆತಂಕಕಾರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts