

ಬಂಟ್ವಾಳ: ಮನಸ್ಸಿನಲ್ಲ್ಲಿ ಏಕಾಗ್ರತೆ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡಬೇಕು ಎಂದು ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನ ಸಂಚಾಲಕ ಸುರೇಶ್ ಬಾಳಿಗ ಹೇಳಿದರು.
ಎಸ್.ವಿ.ಎಸ್. ದೇವಳ ಕನ್ನಡ ಮಾಧ್ಯಮ ಶಾಲೆಯಲ್ಲಿ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಪುರುಷೋತ್ತಮಾನಂದರು ಬರೆದಿರುವ ಪುಸ್ತಕ ವಿತರಣೆ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷ ತಾರಾನಾಥ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಜಯಾನಂದ ಪೆರಾಜೆ ಶುಭಹಾರೈಸಿದರು. ವಿವೇಕ ವಂಶಿ ಫೌಂಡೇಶನ್ ಕರ್ನಾಟಕದ ಸಂಯೋಜಕ ಪ್ರಭಂಜನ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ವಿವೇಕ ಫೌಂಡೇಶನ್ ವತಿಯಿಂದ ನೀಡಲಾಗುವ ಪುಸ್ತಕ ಹಾಗೂ ಪ್ರಶ್ನೆ ಪ್ರತಿಕೆಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಸುರೇಖಾ ಉಪಸ್ಥಿತರಿದ್ದರು.
ಪ್ರಾಂಶುಪಾಲ ಗಂಗಾಧರ ಆಳ್ವ ಸ್ವಾಗತಿಸಿದರು. ಸಂಯೋಜಕಿ ರೇಖಾ ರಾವ್ ನಿರೂಪಿಸಿದರು. ವಕೀಲ ರವೀಂದ್ರ ಕುಕ್ಕಾಜೆ ವಂದಿಸಿದರು.