ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಮತ್ತು ಉಡುಪಿ ಜನಸೇವಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ 7ನೇ ವರ್ಷದ ಪುಸ್ತಕ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ನಡೆಯಿತು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಕಾಲ್ತೋಡು ಆಯುಷ್ ಚಿಕಿತ್ಸಾ ಕೇಂದ್ರ ವೈದ್ಯಾಧಿಕಾರಿ ಡಾ.ವೀಣಾ ಕಾರಂತ ಕಾರ್ಯಕ್ರಮ ಉದ್ಘಾಟಿಸಿದರು.
ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫರ್ನಾಂಡಿಸ್, ಝುಹೀರ್ ಅಹಮ್ಮದ್ ನಾಖುದಾ, ನಿರ್ಮಲಾ ಆರ್.ಪೂಜಾರಿ, ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸತೀಶ ಜಿ., ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಪೂಜಾರಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಕಲ್ಲಾಗರ ಮತ್ತಿತರರು ಉಪಸ್ಥಿತರಿದ್ದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸದಸ್ಯರ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯರ್ಶಿ ಅರುಣ್ ಕುಮಾರ್ ಗಂಗೊಳ್ಳಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ದಿನಕರ ಪೂಜಾರಿ ವಂದಿಸಿರು.