ಗುಣಮಟ್ಟದ ಶಿಕ್ಷಣದಿಂದ ಆತ್ಮವಿಶ್ವಾಸ ಉದ್ದೀಪನ : ನಿವೃತ್ತ ಮುಖ್ಯಶಿಕ್ಷಕಿ ಪುಷ್ಪಲತಾ ಅನಿಸಿಕೆ

New Project (10)
Published on

ಬೆಳ್ತಂಗಡಿ: ವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯ ಎಂದು ನಿವೃತ್ತ ಮುಖ್ಯಶಿಕ್ಷಕಿ ಪುಷ್ಪಲತಾ ಹೇಳಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಸಂಘ ದತ್ತಿನಿಧಿ ಯೋಜನೆಯಡಿ ನೀಡಲ್ಪಡುವ ಪುಸ್ತಕ ಉಚಿತ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಪ್ರವೀಣ್ ಕುಮಾರ್ ಎಚ್.ಎಸ್. ಸ್ವಾಗತಿಸಿದರು. ಶಿಕ್ಷಕಿ ವಿಶಾಲಾ ಜಗದೀಶ್ ವಂದಿಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ದತ್ತಿನಿಧಿ ಯೋಜನೆಯಿಂದ ನೀಡಲ್ಪಡುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಸಾಧನೆಗೈದ ವಿದ್ಯಾರ್ಥಿಗಳಾದ ಮೌಲ್ಯ ಕಾಪಿನಡ್ಕ, ಸುಜ್ಞಾ ಅಶ್ವಥಪಲಿಕೆ, ರಿತಿಕಾ ಪೂಜಾರಿ ಬಳಂಜ, ರಮ್ಯಾ ಬಳಂಜ ಅವರನ್ನು ಸನ್ಮಾನಿಸಲಾಯಿತು. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ೇತನ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ನೀರಿನ ಬಾಟಲಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net