ಕೈಕಾರ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ

New Project (21)
Published on

ಪುತ್ತೂರು ಗ್ರಾಮಾಂತರ: ಒಳಮೊಗ್ರು ಗ್ರಾಮದ ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರಿನ ಬೆಳಕು ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ ಎಸ್‌ಡಿಎಂಸಿ ಅಧ್ಯಕ್ಷೆ ಶೀಲಾವತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಒಳಮೊಗ್ರು ಪಿಡಿಒ ಅವಿನಾಶ್ ಬಿ.ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಪುಸ್ತಕ ದಾನಿ ಉದ್ಯಮಿ ಸಂತೋಷ್ ರೈ ಕೈಕಾರ ಅವರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಎಲ್‌ಕೆಜಿ, ಯುಕೆಜಿ, ಒಂದರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.

ಶಾಲಾ ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ, ಪ್ರಮುಖರಾದ ಚಂದ್ರಹಾಸ ರೈ, ಶಾರದಾ, ಕಿರಣ್ ರೈ ಪುಂಡಿಕ್ಕಾ, ಪ್ರಜ್ವಲ್ ರೈ ತೊಟ್ಲ, ಸಂಯೋಜಕ ನವೀನ ರೈ, ಶಿಕ್ಷಕರಾದ ಸುರರಾಜ್, ಶೋಭಾ, ವೇದಾಕ್ಷಿ ಹಾಗೂ ಪಾಲಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ರಾಮಣ್ಣ ರೈ ಸ್ವಾಗತಿಸಿದರು. ಶಿಕ್ಷಕಿ ರಾಜೇಶ್ವರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net