ಮರವಂತೆ ಶ್ರೀ ರಾಮ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

distribution
ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮತ್ತು ಮಾರ್ಕೆಟ್ ಸಮಿತಿ ಮರವಂತೆ ವತಿಯಿಂದ 10ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು
Published on

ಗಂಗೊಳ್ಳಿ: ಮರವಂತೆ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮತ್ತು ಮಾರ್ಕೆಟ್ ಸಮಿತಿ ಮರವಂತೆ ವತಿಯಿಂದ 10ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ ಮರವಂತೆ ಶ್ರೀ ರಾಮ ಮಂದಿರದಲ್ಲಿ ಬುಧವಾರ ನಡೆಯಿತು.

ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಬಿ.ಸುರೇಶ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮಾರ್ಕೆಟ್ ಸಮಿತಿ ಉಪಾಧ್ಯಕ್ಷ ರತ್ನಾಕರ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಅಧ್ಯಕ್ಷ ಪಿ.ಚಂದ್ರ ಖಾರ್ವಿ, ಕೆ.ಎಂ.ಬಚ್ಚ ಖಾರ್ವಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮರವಂತೆ ಭಾಗದ ಮಾಟುಬಲೆ ದೋಣಿಯಲ್ಲಿ ದುಡಿಯುವ ಎಲ್ಲ ಸಮಾಜದ 1ನೇ ತರಗತಿಯಿಂದ 10ನೇ ತರಗತಿ ತನಕದ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net