ಲೋಕ ಸಮರ ಯಶಸ್ವಿಗೆ ಸಹಕರಿಸಿ

ವಿಜಯವಾಣಿ ಸುದ್ದಿಜಾಲ ಬೀದರ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ರಂಗಮಂದಿರ, ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಎರಡು ಹಂತಗಳಲ್ಲಿ ತರಬೇತಿ ನಡೆಯಿತು. ಬೀದರ್ ಉತ್ತರ ವಿಧಾನಸಭೆ ಕ್ಷೇತ್ರದ 500ಕ್ಕೂ ಹೆಚ್ಚು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು (ಪಿಆರ್ಒ), 400ಕ್ಕೂ ಹೆಚ್ಚು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು (ಎಪಿಆರ್ಒ) ಹಾಗೂ ಮತಗಟ್ಟೆ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ಯಶಸ್ವಿ ನಡೆಯಲು ಎಲ್ಲರೂ ಸಹಕರಿಸಬೇಕು ಎಂದರು.

ಬೀದರ್ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಎಸಿ ಶಂಕರ ವಣಕ್ಯಾಳ ಮಾತನಾಡಿ, ಏನೇ ಅನುಮಾನ, ಗೊಂದಲ ಇದ್ದರೆ ತರಬೇತಿ ವಿಭಾಗದ ಕ್ಷೇತ್ರದ ತರಬೇತುದಾರರಿಗೆ ಕೇಳಿ ಬಗೆಹರಿಸಿಕೊಳ್ಳಬೇಕು. ಯಂತ್ರದ ಕಾರ್ಯವಿಧಾನ ಬಗ್ಗೆ ಅನುಮಾನಗಳಿದ್ದರೆ ಮಸ್ಟರಿಂಗ್ ಕೇಂದ್ರದಲ್ಲಿ ಲಭ್ಯವಿರುವ ತರಬೇತಿಗಾಗಿ ಇರಿಸಿದ ಯಂತ್ರಗಳನ್ನು ಪ್ರಾಯೋಗಿಕವಾಗಿ ಬಳಸಿ ಮಾಹಿತಿ ಜ್ಞಾನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಚುನಾವಣಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿ, ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *