ಕಾರವಾರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಒಬ್ಬನನ್ನು ಗಡಿಪಾರು ಮಾಡಲಾಗಿದೆ.
ನಿರಂತರ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದ ಕಾರವಾರ ತಾಲೂಕಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕೇರಿಯ ನಿವಾಸಿ ನಿಜಾಮುದ್ದಿನ ಖತೀಬ(42 ವರ್ಷ) ವ್ಯಕ್ತಿಯನ್ನು ಮೇ 6 ರ ವರೆಗೆ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ 2024ರ ಲೋಕಸಭಾ ಸಾರ್ವತ್ರಿಕ ಚುನಾವಣಾ ಸಮಯದಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ, ಅದೇಶಿಸಲಾಗಿದೆ ಎಂದು ಎಸ್ ಪಿ ಎನ್.ವಿಷ್ಣುವರ್ಧನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.