

ಪರ್ತ್: ಇಲ್ಲಿನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವು 218 ರನ್ಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದು, ಆತಿಥೇಯರನ್ನು ಸಂಕಷ್ಟಕ್ಕೆ ದೂಡಿದೆ.
7 ವಿಕೆಟ್ ನಷ್ಟದೊಂದಿಗೆ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್ಗಳು ಎದುರಾಳಿ ತಂಡವನ್ನು 104 ರನ್ಗಳಿಗೆ ಆಲೌಟ್ ಮಾಡಿತು. 46 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡವು ದಿನದಾಟದ ಅಂತ್ಯಕ್ಕೆ 218 ರನ್ಗಳ ಮುನ್ನಡೆಯನ್ನು ಸಾಧಿಸಿದೆ.
46 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಯಶಸ್ವಿ ಜೈಸ್ವಾಲ್ (90 ರನ್, 193 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ಕೆ.ಎಲ್. ರಾಹುಲ್ (62 ರನ್, 153 ಎಸೆತ, 4 ಬೌಂಡರಿ) ತಲಾ ಅರ್ಧಶತಕ ಸಿಡಿಸುವ ಮೂಲಕ ದಿನವಿಡೀ ಕಾಂಗರೂ ಬೌಲರ್ಗಳನ್ನು ಕಾಡಿದರು. ಮೊದಲ ಇನ್ನಿಂಗ್ಸ್ನಲ್ಲಿ ಸರಾಗವಾಗಿ ವಿಕೆಟ್ ಕಿತ್ತಿದ್ದ ಕಾಂಗರೂ ಬೌಲರ್ಗಳು ಎರಡನೇ ದಿನ ಪರದಾಡಿದರು. ಅಂತಿಮವಾಗಿ ಎರಡನೇ ದಿನದಾಟದ ಅಂತ್ಯಕ್ಕೆ 172 ರನ್ ಗಳಿಸುವ ಮೂಲಕ 218 ರನ್ಗಳ ಭರ್ಜರಿ ಲೀಡ್ ಪಡೆದಿದೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.