

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹಾಗೂ ಗೆಳತಿ ಕ್ಯಾರಿ ಸೈಮಂಡ್ಸ್ ಮೊದಲನೇ ಮಗುವಿಗೆ ಜನ್ಮ ನೀಡಿದ್ದಾರೆ. ಲಂಡನ್ನ ಆಸ್ಪತ್ರೆಯಲ್ಲಿ ಸೈಮೆಂಡ್ಸ್ ಗಂಡು ಮಗುವಿಗೆ ಜನ್ಮವಿತ್ತಿದ್ದು ತಾಯಿ ಮತ್ತು ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ತಿಂಗಳ ಹಿಂದೆ ಬೋರಿಸ್ರಲ್ಲಿ ಕೊರನಾ ವೈರಸ್ ಪತ್ತೆಯಾಗಿತ್ತು. ಸೈಮೆಂಡ್ಸ್ ರಲ್ಲೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತಾದರೂ ಅವರ ವೈದ್ಯಕೀಯ ವರದಿಯಲ್ಲಿ ಸೋಂಕು ದೃಢವಾಗಿರಲಿಲ್ಲ. ಬೋರಿಸ್ ತಿಂಗಳ ಕಾಲ ಚಿಕಿತ್ಸೆಯನ್ನು ಪಡೆದಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೋರಿಸ್ ಜಾನ್ಸನ್ ಈ ಹಿಂದೆ ಮರಿನಾ ವೀಲರ್ರನ್ನು ಮದುವೆಯಾಗಿದ್ದು, ನಾಲ್ಕು ಮಕ್ಕಳಿದ್ದಾರೆ. 2018ರ ಸೆಪ್ಟೆಂಬರ್ನಲ್ಲಿ ಅವರು ವಿಚ್ಛೇದನ ಪಡೆದಿದ್ದರು.