ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

Boy
Published on

ಮುಂಬೈ: ಬಾಲಕನೊಬ್ಬ ತಲೆ ಮೇಲೇ ಆಸ್ಪತ್ರೆಯೊಂದರ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಈ ಪ್ರಕರಣ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್ ಆಗಿದೆ.

ಅರ್ನವ್ ನಲವಾಡೆ ಎಂಬ 9 ವರ್ಷದ ಬಾಲಕ ಸಾವಿಗೀಡಾದವ. ಮಹಾರಾಷ್ಟ್ರದ ಒಸ್ಮಾನಾಬಾದ್​ನ ವಾಶಿಯಲ್ಲಿನ ಖಾಸಗಿ ಆಸ್ಪತ್ರೆ ಶ್ರೀವಿಠಲ್​ನ ಆಕ್ಸಿಜನ್​ ಸಿಲಿಂಡರ್​ ಬಿದ್ದು ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಹೊರಗೆ ಇರಿಸಿದ್ದ ಆಕ್ಸಿಜನ್ ಸಿಲಿಂಡರ್ ಉರುಳಿದ್ದು, ಅದು ನೇರ ಈ ಬಾಲಕನ ತಲೆ ಮೇಲೇ ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಸಂದರ್ಭದಲ್ಲಿ ಆತ ಸಾವಿಗೀಡಾಗಿದ್ದಾನೆ.

ಆಸ್ಪತ್ರೆ ಆವರಣದಲ್ಲಿ ಈ ಬಾಲಕ ಆಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net