20.3 C
Bangalore
Sunday, December 15, 2019

VIDEO: ಅವಿಸ್ಮರಣೀಯ ಕ್ಷಣಗಳು: ಹೌಡಿ ಮೋದಿ ಕಾರ್ಯಕ್ರಮದ ಬಳಿಕ ಶಿರಸಿ ಬಾಲಕನಿಗೆ ಸೆಲ್ಫಿ ಕೊಟ್ಟ ಟ್ರಂಪ್​, ಮೋದಿ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ್ದ ಭಾರತೀಯ ಮೂಲದ ತಂಡ ವೇದಿಕೆ ಸಮೀಪದಲ್ಲೇ ಸಾಲಾಗಿ ನಿಂತು, ಉಭಯ ನಾಯಕರಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದರು. ಅವರನ್ನು ಅಭಿನಂದಿಸುತ್ತಲೇ ಉಭಯ ನಾಯಕರು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ್ದ ತಂಡದಲ್ಲಿದ್ದ ಬಾಲಕ ಧೈರ್ಯ ಮಾಡಿ, ಸೆಲ್ಫಿಗೆ ಅವಕಾಶ ಮಾಡಿಕೊಡುವಂತೆ ಟ್ರಂಪ್​ ಅವರನ್ನು ವಿನಂತಿಸಿಕೊಂಡ. ಇದಕ್ಕೆ ಟ್ರಂಪ್​ ತಕ್ಷಣವೇ ಸ್ಪಂದಿಸಿದರು. ಹೀಗೆ ಧೈರ್ಯವಾಗಿ ಸೆಲ್ಫಿಗೆ ಮನವಿ ಮಾಡಿಕೊಂಡ ಹುಡುಗ ಶಿರಸಿ ಮೂಲದವನು. ಪ್ರಭಾಕರ ಹೆಗಡೆ ಮತ್ತು ಮೇಧಾ ಹೆಗಡೆ ಎಂಬುವರ ಪುತ್ರ ಸಾತ್ವಿಕ್​ ಹೆಗಡೆ ಎಂಬುದು ಗೊತ್ತಾಗಿದೆ.

ಇದಾವುದನ್ನೂ ಗಮನಿಸದೆ ನಾಲ್ಕೈದು ಹೆಜ್ಜೆ ಮುಂದೆ ಸಾಗಿದ್ದ ಪ್ರಧಾನಿ ಮೋದಿ ಅವರನ್ನು ಕರೆದ ಟ್ರಂಪ್​ ಬಾಲಕನಿಗೆ ಸೆಲ್ಫಿ ಪೋಸ್​ ಕೊಟ್ಟರು. ಸಾಂಸ್ಕೃತಿಕ ತಂಡದ ಇತರ ಸದಸ್ಯರು ಇದನ್ನು ಅಚ್ಚರಿಗಣ್ಣಲ್ಲಿ ನೋಡುತ್ತಾ ನಿಂತಿದ್ದರು.

ಪ್ರಧಾನಿ ಕಾರ್ಯಾಲಯ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿದೆ. ಇದಾಗಿ 2 ಗಂಟೆಗಳಲ್ಲಿ 19 ಸಾವಿರಕ್ಕೂ ಹೆಚ್ಚು ಜನರು ಈ ಪೋಸ್ಟ್​ ಅನ್ನು ಲೈಕ್​ ಮಾಡಿದ್ದಾರೆ. ಅದೆಷ್ಟೋ ವಿಶ್ವನಾಯಕರಿಗೆ ದೊರೆಯದ ಸೆಲ್ಫಿ ಅವಕಾಶ ಈ ಬಾಲಕನಿಗೆ ಸಿಕ್ಕಿತು ಎಂದು ಟ್ವೀಟಿಗರೊಬ್ಬರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...