More

    25 ಲಕ್ಷ ರೂ. ಹಣಕ್ಕಾಗಿ ನಡೆಯಿತು ಬರ್ಬರ ಹತ್ಯೆ! ಗೋಣಿಚೀಲದಲ್ಲಿ ಬಾಲಕನ ಶವ ಪತ್ತೆ

    ಮಹಾರಾಷ್ಟ್ರ: ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳೀಯ ಮಸೀದಿಯಲ್ಲಿ ಸಂಜೆ ಪ್ರಾರ್ಥನೆ ಮುಗಿಸಿ ಮನೆಗೆ ಹಿಂತಿರುಗುವಾಗ ದುಷ್ಕರ್ಮಿಗಳು ಆತನನ್ನು ಅಪಹರಿಸಿದ್ದು, ನಂತರದಲ್ಲಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ವರದಿಯಾಗಿದೆ. ಆರೋಪಿಯ ಮನೆಯಲ್ಲಿ ಗೋಣಿಚೀಲದಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರನ್ನು ಬಂಧಿಸಲಾಗಿದೆ.

    ಇದನ್ನೂ ಓದಿ: ‘ನಾಚಿಕೆಯಾಗಬೇಕು ಕಾಂಗ್ರೆಸ್​ಗೆ…’ ಲೋಕಸಭಾ ಟಿಕೆಟ್ ಬೆನ್ನಲ್ಲೇ ಕಂಗನಾ ವಿರುದ್ಧ ಸುಪ್ರಿಯಾ ಅವಹೇಳನಕಾರಿ ಪೋಸ್ಟ್!

    ಘಟನೆಯ ವಿವರ: 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನನ್ನು ಇಬಾದ್ ಎಂದು ಗುರುತಿಸಲಾಗಿದ್ದು, ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳಿದ್ದ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಗೊಂಡು ಅಕ್ಕಪಕ್ಕದ ಸ್ಥಳಗಳಲ್ಲಿ ಹುಡುಕಾಡಿದ್ದಾರೆ. ಆದರೆ, ಹೊತ್ತು ಕಳೆದರೂ ಪುತ್ರ ಮನೆಗೆ ಬರದಿದ್ದಾಗ ಚಿಂತೆ ಮಾಡುತ್ತ ಕುಳಿತ್ತಿದ್ದ ಪೋಷಕರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ.

    ನಿಮ್ಮ ಮಗನನ್ನು ಕಿಡ್ನಾಪ್ ಮಾಡಲಾಗಿದೆ. 25 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ. ಟೈಲರ್ ಆಗಿರುವ ಬಾಲಕನ ತಂದೆ ಮುದಾಸಿರ್ ಬುಬರ್ ಕೂಡಲೇ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಸ್ವಾಮಿ ನೇತೃತ್ವದಲ್ಲಿ ಬದ್ಲಾಪುರ ಪೊಲೀಸರು ಹಾಗೂ ಅಪರಾಧ ವಿಭಾಗದ ಪೊಲೀಸರು ಗೋರೆಗಾಂವ್ ಪ್ರದೇಶದಲ್ಲಿ ರಾತ್ರಿಯಿಡೀ ಇಬಾದ್‌ಗಾಗಿ ಶೋಧ ನಡೆಸಿದ್ದಾರೆ.

    ಇದನ್ನೂ ಓದಿ: ಚೀನಾ ಮತ್ತೆ ಅರುಣಾಚಲ ಕ್ಯಾತೆ: ಭಾರತ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದ ವಿದೇಶಾಂಗ ವಕ್ತಾರ

    ಪೊಲೀಸರು ಕರೆ ಬಂದ ನಂಬರ್ ಟ್ರೇಸ್ ಮಾಡಿ, ಆರೋಪಿಯ ಮನೆಗೆ ನುಗ್ಗಿದ್ದಾರೆ. ಅಷ್ಟೊತ್ತಿಗಾಗಲೇ ಪೊಲೀಸರು ತನ್ನ ಮನೆಗೆ ಬರುತ್ತಿರುವುದು ಆರೋಪಿಗೆ ಮಾಹಿತಿ ಸಿಕ್ಕಿದೆ. ಮನೆಗೆ ನುಗ್ಗುವ ಪೊಲೀಸರು, ಎಲ್ಲಿ ತನಿಖೆ ನಡೆಸುತ್ತಾರೋ ಎಂಬ ಭಯದಿಂದ ಆರೋಪಿಗಳು ಕೂಡಿಟ್ಟಿದ್ದ ಇಬಾದ್​ನನ್ನು ಕೊಂದು ಗೋಣಿಚೀಲದಲ್ಲಿ ಶವವನ್ನು ತುಂಬಿ ಮನೆಯ ಹಿಂದೆ ಬಚ್ಚಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ಗೋಣಿಚೀಲವನ್ನು ವಶಪಡಿಸಿಕೊಂಡಾಗ, ಬಾಲಕನ ಶವ ಪತ್ತೆಯಾಗಿದೆ.

    ಇಬಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಅಪರಾಧದ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಂದು ಎಸ್ಪಿ ಡಿಎಸ್ ಸ್ವಾಮಿ ತಿಳಿಸಿದ್ದಾರೆ,(ಏಜೆನ್ಸೀಸ್).

    ಅದೊಂದು ಪಾತ್ರ ನಾನು ಒಪ್ಪಬಾರದಿತ್ತು! ಆ ತಪ್ಪಿಂದ ನನ್ನ ಆಸೆಯೇ ನುಚ್ಚುನೂರಾಯ್ತು: ನಟಿ ಅರ್ಚನಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts