

ಬಂಟ್ವಾಳ(ದ.ಕ.): ಇಲ್ಲಿನ ಕೆದಿಲ ಪೇರಮುಗೇರು ನಿವಾಸಿ ಚಂದ್ರಹಾಸ ಎಂಬುವರ ಪುತ್ರ, ಕಲ್ಲಡ್ಕ ಶ್ರೀರಾಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸುಬೋದ್(13) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಸಂಜೆ ಗುಡುಗು, ಸಿಡಿಲು ಸಹಿತ ಮಳೆಯಾಗಿತ್ತು. ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದನು.