More

    ಶ್ರೀರಾಮ ವನವಾಸದಲ್ಲಿ ಮಾಂಸ ಸೇವಿಸಿದ್ದ; ಒಟಿಟಿ ಫ್ಲಾಟ್​ಫಾರ್ಮ್​ ಬಹಿಷ್ಕರಿಸುವಂತೆ ಆಗ್ರಹ

    ಚೆನ್ನೈ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಆದರೆ, ಕೆಲವು ರಾಜಕೀಯ ನಾಯಕರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಇದೀಗ ಹೊಸದಾಗಿ ಸಿನಿಮಾದವರು ಇದಕ್ಕೆ ಸೇರ್ಪಡೆಗೊಂಡಿದ್ದು, ಸಾಕಷ್ಟು ಖಂಡನೆಗೆ ಗರಿಯಾಗಿದೆ.

    ಲೇಡಿ ಸೂಪರ್​ಸ್ಟಾರ್​ ನಯನತಾರಾ ಅಭಿನಯದ ಅನ್ನಪೂರ್ಣಿ ಚಿತ್ರವು ಇತ್ತೀಚಿಗೆ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆಯಾಗಿತ್ತು. ವನವಾಸದಲ್ಲಿರುವ ಸಂದರ್ಭದಲ್ಲಿ ರಾಮನೂ ಮಾಂಸಾಹರ ಸೇವನೆ ಮಾಡಿದ್ದ ಎನ್ನುವ ಡೈಲಾಗ್​ ಚಿತ್ರದಲ್ಲಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಡೈಲಾಗ್​ ವೈರಲ್​ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ BoycottNetflix ಅಭಿಯಾನ ಆರಂಭಿಸಲಾಗಿದೆ.

    ಇದನ್ನೂ ಓದಿ: ಕರ್ನಾಟಕದಕ ಸ್ತಬ್ಧಚಿತ್ರ ತಿರಸ್ಕಾರ; ಕೇಂದ್ರ ಸರ್ಕಾರದಿಂದ ಏಳು ಕೋಟಿ ಕನ್ನಡಿಗರಿಗೆ ಅಪಮಾನ: ಸಿಎಂ ಸಿದ್ದರಾಮಯ್ಯ ಕಿಡಿ

    2023 ಡಿಸೆಂಬರ್​ 01ರಂದು ಅನ್ನಪೂರ್ಣಿ ಚಿತ್ರ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಚಿತ್ರವು ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಇತ್ತೀಚಿಗೆ ಸಿನಿಮಾದಲ್ಲಿನ ದೃಶ್ಯ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ವನವಾಸದಲ್ಲಿ ರಾಮ, ಸೀತೆ ಹಾಗೂ ಲಕ್ಷ್ಮಣ ಹಸಿವಾದಾಗ ಪ್ರಾಣಿಗಳನ್ನು ಬೇಟೆ ಆಡಿ ತಿಂದಿದ್ದರು. ರಾಮಾಯಣದಲ್ಲಿ ಈ ಬಗ್ಗೆ ಬರೆಯಲಾಗಿದೆ ಎಂಬ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

    ಇತ್ತ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ರಾಮಮಂದಿರದ ಉದ್ಘಾಟನೆಯ ಹೊಸ್ತಿಲಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಕೂಡಲೇ ಚಿತ್ರತಂಡ ಹಾಗೂ ಒಟಿಟಿ ಫ್ಲಾಟ್​ಫಾರ್ಮ್​ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಲವರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts