ವೃತ್ತ ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ

sports
ಪಡುಬಿದ್ರಿಯಲ್ಲಿ ನಡೆದ ವೃತ್ತಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಮಿಥುನ್ ಆರ್.ಹೆಗ್ಡೆ ಉದ್ಘಾಟಿಸಿದರು
Published on

ಪಡುಬಿದ್ರಿ: ಜಿಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ, ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಸಹಯೋಗದಲ್ಲಿ ಪಡುಬಿದ್ರಿಯಲ್ಲಿ ಶನಿವಾರ ವೃತ್ತಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಉದ್ಯಮಿ ಮಿಥುನ್ ಆರ್.ಹೆಗ್ಡೆ ಉದ್ಘಾಟಿಸಿದರು.

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಆನುವಂಶಿಕ ಮೊಕ್ತೇಸರ ರತ್ನಾಕರರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್ ಕ್ರೀಡಾ ತಂಡ ಪಥ ಸಂಚಲನ ಗೌರವ ರಕ್ಷೆ ಸ್ವೀಕರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ವಸಂತ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

ಗ್ರಾಪಂ ಸದಸ್ಯರಾದ ಶೇಖರ್, ನಿಯಾಜ್, ಅಶೋಕ್ ಪೂಜಾರಿ, ಮಾಜಿ ಸದಸ್ಯ ದಯಾನಂದ ಶೆಟ್ಟಿ, ಜಿಪಂ ಮಾಜಿ ಸದಸ್ಯ ಶಶಿಕಾಂತ ಪಡುಬಿದ್ರಿ, ತಾಪಂ ಮಾಜಿ ಸದಸ್ಯೆ ನೀತಾಗುರುರಾಜ್, ಶಾಲಾ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಕೃಷ್ಣ ಬಂಗೇರ, ಯುವಜನ ಮತ್ತು ಕ್ರೀಡಾ ಇಲಾಖೆ ತಾಲೂಕು ಅಧಿಕಾರಿ ರಿತೇಶ್‌ಕುಮಾರ್ ಶೆಟ್ಟಿ ಸೂಡ, ರಾಮಕೃಷ್ಣ ಭಟ್, ಚಂದ್ರಶೇಖರ ಸುವರ್ಣ, ಪ್ರೌಢಶಾಲೆ ಮುಖ್ಯೋಪಾಧ್ಯಯಿನಿ ಗೀತಾ ಶೆಟ್ಟಿ, ವಿಠಲ್ ಕೋಟ್ಯಾನ್, ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಅಜಯ್‌ಕುಮಾರ್ ಸ್ವಾಗತಿಸಿ, ವಿದ್ಯಾರ್ಥಿ ಸನ್ನಿಧಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಜಾನೆಟ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net